Visit Channel

ಕೊರೊನಾ ಲಸಿಕೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯಕ್ಕೆ ಸಿದ್ದರಾಮಯ್ಯ ಕಿಡಿ

images

ಬೆಂಗಳೂರು, ಮೇ. 14: ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬ ಆಶಯದೊಂದಿಗೆ ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರು ಸಂಸದರಿಂದ 100 ಕೋಟಿ ರೂ. ನೀಡಲು ನಿರ್ಧಾರಿಸಲಾಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಶುಕ್ರವಾರ ಮಾತನಾಡಿದ ಅವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಪ್ರತಿ ವರ್ಷ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದ್ದು, ಪ್ರದೇಶಾಭಿವೃದ್ಧಿ ನಿಧಿ ಎಂದು ನೀಡಲಾಗುತ್ತದೆ.  ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ಲಸಿಕೆ ಖರೀದಿಸಲು ರಾಜ್ಯ ಸರಕಾರಕ್ಕೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಪ್ರತಿಯೊಬ್ಬರಿಗೆ ಕೊರೊನಾ ಲಸಿಕೆ ದೊರೆಯುವಂತಾಗಬೇಕು ಎಂಬುದು ನಮ್ಮ ಬಯಕೆ. ಆದ್ದರಿಂದ ಕಾಂಗ್ರೆಸ್ ನಲ್ಲಿ 99 ಶಾಸಕರು ಇದ್ದಾರೆ. ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಮೊತ್ತವನ್ನೂ ಸೇರಿಸಿ 100 ಕೋಟಿ ರೂ. ನೀಡಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಧಾನಿ ಮೋದಿ ನಿದ್ರಾವಸ್ತೆಯಲ್ಲಿದ್ದಾರೆ.  ಕೇಂದ್ರ,ರಾಜ್ಯ ಸರ್ಕಾರಕ್ಕೆ ವ್ಯಾಕ್ಸಿನ್ ನೀಡುತ್ತಿಲ್ಲ. ಲಸಿಕೆ ಹಂಚಿಕೆಯಲ್ಲಿ ಸಂಪೂರ್ಣ ವಿಫಲವಾಗಿವೆ.

ಹೈಕೋರ್ಟ್,ಸುಪ್ರೀಂ ಕೂಡ ಛೀಮಾರಿ‌ಹಾಕಿದೆ. ನಿನ್ನೆಯೂ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ನನ್ನ ರಾಜಕೀಯದಲ್ಲಿ ಇಂತ ಬೇಜವಾಬ್ದಾರಿ ಸರ್ಕಾರ ನೋಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ ಅವರು, 18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಹೀಗಾಗಿ ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.