ಅಮಿತ್ ಶಾ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ : ಸಿದ್ದರಾಮಯ್ಯ!

siddaramaiah

ಕೆಲವು ಬಿಜೆಪಿ(BJP) ನಾಯಕರು ಗೃಹ ಸಚಿವ(Homeminister) ಅಮಿತ್ ಶಾ(Amit Shah) ಅವರ ಹಿಂದಿ ಹೇರಿಕೆಗೆ(Hindi Imposition) ಸಾಥ್ ನೀಡುತ್ತಿದ್ದಾರೆ.

ರಾಜಕೀಯ ಅಧಿಕಾರಕ್ಕಾಗಿ ನಮ್ಮ ಮಾತೃಭಾಷೆಯನ್ನು ಬಿಟ್ಟುಕೊಡುವುದು ಬೇಡ. ದೆಹಲಿ ಹೈಕಮಾಂಡ್‍ನ್ನು ಓಲೈಸಲು ಗುಲಾಮರಾಗುವುದು ಬೇಡ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಸರಣಿ ಟ್ವೀಟ್‍ಗಳ ಮೂಲಕ ರಾಜ್ಯ ಬಿಜೆಪಿ(State BJP) ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್‍ಗಳಲ್ಲೇನಿದೆ..?

“ಇಂಗ್ಲೀಷ್, ತಮಿಳು, ಹಿಂದಿ, ತೆಲುಗು ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಈ ಎಲ್ಲ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆಯಾಗಬೇಕು..” “ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ನಮ್ಮ ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನಮ್ಮ ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.”

“ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷೆ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.” “ಹಿಂದಿ ಭಾಷೆಯ ಪರ ವಕಾಲತು ಮಾಡಲು ಹೊರಟಿರುವ ಸಿ.ಟಿ ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.”

“ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ.” “ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.”

Exit mobile version