ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

BJP

ಕೆ.ಎಸ್ ಈಶ್ವರಪ್ಪ(KS Eshwarappa) ಅವರನ್ನು ಇನ್ನೂ ಪಕ್ಷದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ(State BJP) ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ರಾಜ್ಯ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ರಾಷ್ಟ್ರಧ್ವಜದ ಜಾಗದಲ್ಲಿ ಭಗವಾಧ್ವಜ ಹಾರಿಸುತ್ತೇವೆ ಎಂದು ಹೇಳಿದ ಈಶ್ವರಪ್ಪ ಅವರನ್ನು ಇನ್ನೂ ಪಕ್ಷದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

ಮಸೂದ್ ಮತ್ತು ಫಾಜಿಲ್ ಕುಟುಂಬವನ್ನು ಭೇಟಿಯೂ ಮಾಡಿಲ್ಲ, ಪರಿಹಾರವನ್ನೂ ಘೋಷಿಸಿಲ್ಲ. ಸರ್ಕಾರದ ಬೊಕ್ಕಸದಿಂದ ನೀಡುವ ಪರಿಹಾರದಲ್ಲಿ ಇಂತಹಾ ತಾರತಮ್ಯ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಪಿ.ಎಫ್.ಐ, ಎಸ್.ಡಿ.ಪಿ.ಐ ಈ ಯಾವ ಸಂಘಟನೆಗಳೇ ಆಗಲಿ ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ, ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ, ರಾಜ್ಯ ಬಿಜೆಪಿ ಸರ್ಕಾರ ಅಂತಹಾ ಸಂಘಟನೆಗಳನ್ನು ನಿಷೇಧ ಮಾಡಲಿ.

ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೆ ಸರ್ಕಾರ ಇದೆ. ಆದರೂ ಯಾಕೆ ಸುಮ್ಮನಿದ್ದೀರ? ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇನ್ನು ಕೆಲ ದಿನಗಳ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜದ ಬಣ್ಣಗಳನ್ನು ಕೆಂಪು, ಬಿಳಿ, ಹಸಿರು ಎಂದು ತಪ್ಪಾಗಿ ಹೇಳಿದ್ದರು. ಇದನ್ನೇ ಇಟ್ಟುಕೊಂಡು ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯನವರಿಗೆ ದೇಶಭಕ್ತಿ ಇಲ್ಲ ಎಂದು ಟೀಕಿಸಿದ್ದರು. ಅದಕ್ಕೆ ಪ್ರತಿಕ್ರಿಯೆಯನ್ನು ಇದೀಗ ಸಿದ್ದರಾಮಯ್ಯ ನೀಡಿದ್ದಾರೆ.

Exit mobile version