No Dress code Enforced for Visitors to Chamundi Hill: CM clarifies.
Mysore: ಚಾಮುಂಡಿ ಬೆಟ್ಟದಲ್ಲಿರುವ (Chamundi Hill) ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ. ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು (Dress Code) ಜಾರಿ ಮಾಡಿಲ್ಲ. ಎಲ್ಲಾ ಜಾತಿ, ಧರ್ಮದವರು ದೇವಸ್ಥಾನಕ್ಕೆ ಬರಬಹುದು. ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ (Mysore) ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ. ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು.
ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ, ಮಹದೇಶ್ವರ ದೇವಸ್ಥಾನ (Mahadeshwara Temple), ಸವದತ್ತಿಯ ಯಲ್ಲಮ್ಮ, ಘಾಟಿ ಸುಬ್ರಮಣ್ಯ (Ghati Subramanya) ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ ಎಂದು ತಿಳಿಸಿದ್ದಾರೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಶುಕ್ರವಾರ, ಶನಿವಾರ, ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ.
ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು.
ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು. ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ಲಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ, 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದಿದ್ದಾರೆ.
ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ (CCTV) ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ (Union Bank) ನವರು ಸಿಎಸ್ಆರ್ ನಿಧಿಯಿಂದ ಸಿಸಿ ಟಿವಿಗಳ ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ (Task Force) ಅನ್ನು ರಚನೆ ಮಾಡಲಾಗುವುದು. ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಸೇವನೆ ಸಂಪೂರ್ಣ ನಿಷೇದಿಸಲಾಗಿದೆ.
ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ (Plastic) ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು.
Siddaramaiah Today News Kannada
ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ, ಗಾಯತ್ರಿಯಮ್ಮನವರ ದೇವಾಲಯ, ಭುವನೇಶ್ವರಿ ಅಮ್ಮನವರ ದೇವಾಲಯ, ಕೋಟೆ ಆಂಜನೇಯ ದೇವಾಲಯ, ವರಾಹಸ್ವಾಮಿ ದೇವಾಲಯಗಳ ಈ ಐದು ದೇವಾಲಯಗಳ ಸಮೂಹದ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂ ಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟ ವ್ಯವಸ್ಥೆಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾಧಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ. ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
Mysore: Development of Nandi statue at Devikere on Chamundi Hill has been decided. The Authority works keeping in mind the views expressed by the MLAs and Ministers. Steps to the hill will be developed.
There is no dress code enforced for visitors to Chamundi Hill. People of all castes and religions can visit the temple. The rope way was not discussed in today’s meeting. CM Siddaramaiah said that it was stopped earlier due to the opposition of environmentalists.
Speaking in Mysore, he said that he has been instructed to prepare a master plan for the development works to be done in Chamundeshwari constituency. The Chamundeshwari Authority was created by the government and earlier, the executive officers under the committee headed by the Additional District Collector were responsible for the development of the temple and providing facilities to the devotees.
Mahadeshwar Constituency Development Authority has also been formed. He said that the government has created an authority for Huligemma temple, Mahadeshwara temple, Savadattiya Yallamma, Ghati Subramanya temple. Along with the world famous Dasara festival, many devotees visit Chamundeshwari Kshetra on Fridays, Saturdays and Sundays. There are a lot of development works in Srikshetra. Some of them are complete while some are not.
The authority was formed with the objective of developing 23 temples belonging to Chamundi field and hills and providing facilities to the devotees. A bus stand, parking lot and shops have been constructed in the past. Instructions have been given to complete the programs which have been taken up in the past. Although the drinking water works have been sanctioned in 2018, they are yet to be completed. The Urban Development Authority has been instructed to complete it immediately. Civil works of garbage disposal works are complete It should be electrified and made available for public use within this month.
It is advised to pay attention to cleanliness. Cleanliness should be maintained not only in Chamundi temple but also in all temples. A total of Rs 169.22 crore is available in the authority and Rs 20.24 crore is available in the temple savings account. In 2023-24, revenue of Rs.49.64 crore, net income of Rs.28.18 crore. 17.4 crores in revenue and 6.97 crores in expenditure till the end of July. Income is increasing every year. That means the number of visiting devotees is increasing.
It has been decided that CCTV should be installed in the temples where necessary, Union Bank will support the installation of CCTVs with CSR funds. A task force will be formed to curb crimes in the area along with lighting arrangements around the temple. Smoking, drinking, consumption of Gutka is completely prohibited on Chamundi Hill.
It has been decided to make the hill area plastic free. Prasada project has been approved by the Central Government and the Department of Tourism, and the additional Rs 11 crore required for this project will be borne by the Chamundeshwari Development Authority. Photography is prohibited inside the temple and mobile phones will be banned.
The restoration work of this group of five temples namely Prasanna Krishna Swamy Temple, Gayatriammanavar Temple, Bhubaneswari Ammanavara Temple, Kote Anjaneya Temple, Varahaswamy Temples will be undertaken. It has been decided to provide medical facilities to the permanent staff working here and educational facilities to their children.
It is decided to make the Chamundibetta constituency more attractive as well as provide more privileges. It has been decided to improve the facilities of the Dasoha Bhavan here and make food arrangements for the devotees to have a clean taste. 169 crores fixed deposit in the Chamundikshetra authority, the income of which can meet all these expenses. As the land belonging to the temple is likely to be encroached upon,They have been told to conduct a survey and the report of the survey has been suggested to be presented in the next meeting of the authority.