ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿದ್ದರಾಮಯ್ಯ ಕಿಡಿ

Karnataka : ಬಿಜೆಪಿ ಸರ್ಕಾರ (siddaramaiah tweet State bjp) ಪೊಲೀಸ್‌ ಬಲಪ್ರಯೋಗಿಸಿ ಪ್ರತಿಭಟನಾಕಾರರ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ,

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರದ ನಡೆಯನ್ನು ಕಟುವಾಗಿ ಖಂಡಿಸಿದರು.

Siddaramaiah

ಅವರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸರಣಿ ಟ್ವೀಟ್ (siddaramaiah tweet State bjp) ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಒಟ್ಟು ನಾಲ್ಕು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರು ತಮ್ಮ ಮೊದಲ ಟ್ವೀಟ್‌ನಲ್ಲಿ ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ.

ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಅವರನ್ನು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : https://vijayatimes.com/himachalpradesh-cm-sukhwinder-singh/

ಎರಡನೆ ಟ್ವೀಟ್‌ನಲ್ಲಿ, ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು.

ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸ್‌ ಬಲಪ್ರಯೋಗದ ಮೂಲಕ ಹಣಿಯಲು ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಎಂದು ಟ್ವೀಟ್‌ನಲ್ಲಿ ಕಟುವಾಗಿ ಟೀಕಿಸಿದ್ದಾರೆ.

https://youtube.com/shorts/N31q5oOc_Iw

ಇದೇ ವಿಚಾರವಾಗಿ ಮೂರನೇ ಟ್ವೀಟ್ ಮಾಡಿ ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಒಳಮೀಸಲಾತಿ ಹೋರಾಟದ ಕುರಿತ ತಮ್ಮ ಕೊನೆಯ ಟ್ವೀಟ್‌ನಲ್ಲಿ , ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ(Central Govt) ಶಿಫಾರಸು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
Exit mobile version