ಬಿಜೆಪಿಯವರು ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ, ಇದು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ : ಸಿದ್ದರಾಮಯ್ಯ

Karnataka: ಕಳೆದ ಎಂಟು ವರ್ಷಗಳಿಂದ ಬಿಜೆಪಿ(BJP) ನಾಯಕರು ನನ್ನ ವಿರುದ್ಧ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ(Siddaramaiah tweets to BJP) ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ,

ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ದ ಟ್ವೀಟ್‌(Tweet) ಮೂಲಕ ವಾಗ್ದಾಳಿ ನಡೆಸಿರುವ ಅವರು, ನನ್ನ ವಿರುದ್ಧ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ,

ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ.

ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ(BBC Media) ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ ಬಿಜೆಪಿ ಪಕ್ಷಕ್ಕಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಸುವಿನ ಸಗಣಿ ತಿಂದರೆ ನಾರ್ಮಲ್‌ ಡೆಲಿವರಿ ಆಗುತ್ತೆ : ಆರ್‌ಎಸ್‌ಎಸ್‌ ಮುಖಂಡ ಪ್ರಮುಖ್‌ ಶಂಕರ್‌ಲಾಲ್‌

ಇನ್ನೊಂದು ಟ್ವೀಟ್‌ನಲ್ಲಿ(Tweet), ಪ್ರಧಾನಿ ನರೇಂದ್ರ ಮೋದಿಯವರ(Narendra Modi) ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.

ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?

ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ? ಎಂದು ಟೀಕಿಸಿದ್ದಾರೆ.

ಇನ್ನು ಬ್ರಿಟನ್‌ನ(Britain) ಬಿಬಿಸಿ ಸಂಸ್ಥೆ ನಿರ್ಮಿಸಿರುವ ಗುಜರಾತ್‌ (Gujarat)ಗಲಭೆಗೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಭಾರತ ಸರ್ಕಾರ ನಿಷೇಧಿಸಿದೆ.

ಈ ಸಾಕ್ಷ್ಯಚಿತ್ರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ.

ಈ ಸಾಕ್ಷ್ಯಚಿತ್ರದಲ್ಲಿ, 2002ರ ಗುಜರಾತ್ ಗಲಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಅಂದಿನ ಮುಖ್ಯಮಂತ್ರಿಯಾಗಿ “ನೇರವಾಗಿ ಹೊಣೆಗಾರರಾಗಿದ್ದಾರೆ” ಎಂದು ಬಿಬಿಸಿ ಬಿಂಬಿಸಿದೆ. ಬ್ರಿಟನ್‌ನಲ್ಲಿ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಪ್ರಸಾರ ಮಾಡಲಾಗಿತ್ತು.

ಆದರೆ 59 ನಿಮಿಷಗಳ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡಲಾಗಿಲ್ಲ. ಆದರೂ ಇದನ್ನು ಟ್ವಿಟರ್(Twitter) ಮತ್ತು ಯೂಟ್ಯೂಬ್‌ನಲ್ಲಿ (Youtube)ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಹೀಗಾಗಿ ಭಾರತ ಸರ್ಕಾರ ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಬಿಬಿಸಿಯ ಸಾಕ್ಷ್ಯಚಿತ್ರದ ತುಣುಕುಗಳನ್ನು ನಿರ್ಬಂಧಿಸಲು ಯೂಟ್ಯೂಬ್ ಮತ್ತು ಟ್ವಿಟರ್ ಎರಡಕ್ಕೂ ಆದೇಶಗಳನ್ನು ನೀಡಿದೆ. ಸರ್ಕಾರದ ಈ ನಡೆಯನ್ನು ವಿಪಕ್ಷಗಳು ಟೀಕಿಸಿವೆ.

Exit mobile version