ಸಿದ್ದರಾಮಯ್ಯನವರು ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದ್ದಾರೆ : ಬಿಜೆಪಿ

Bengaluru : ಮಾನ್ಯ ಸಿದ್ದರಾಮಯ್ಯ(Siddaramaiah) ಅವರು ವೋಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ(Vande Matharam) ಗೀತೆಗೆ,

ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂದು ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ(BJP), ರಾಷ್ಟ್ರದ್ರೋಹಿ ಕಾಂಗ್ರೆಸ್ ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸಿನಿಂದ ಒಪ್ಪಿಕೊಂಡಿರುವ,

ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ. ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು,

ಈಗ ಅದೇ ಸಾಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೇರ್ಪಡೆಯಾಗಿದ್ದಾರೆ ಎಂದು ಟೀಕಿಸಿದೆ. ಪ್ರತಿಪಕ್ಷದ ನಾಯಕ  ಸಿದ್ದರಾಮಯ್ಯ ಅವರು ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು,

ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ. 

ಇದನ್ನೂ ಓದಿ : https://vijayatimes.com/rishab-shetty-about-culture/

ಉಗ್ರ ಕಸಬ್ ಮತ್ತು ಉಗ್ರ ಶಾರೀಖ್ ಇವರಿಬ್ಬರೂ ಹಿಂದುತ್ವದ ಮುಖವಾಡ ಹಾಕಿಕೊಂಡು ವಿಧ್ವಂಸಕ ಕೃತ್ಯ ಎಸಗಿದವರು. ಆದರೆ ಇವರು ಸೆರೆಸಿಕ್ಕ ಕಾರಣಕ್ಕೆ ಹಿಂದೂ ಭಯೋತ್ಪಾದನೆ ಎಂದು ಸುಳ್ಳು ಹಬ್ಬಿಸುವ ಉಗ್ರರ ಷಡ್ಯಂತ್ರ ಬಯಲಾಗಿದೆ.

ಉಗ್ರರು ಸೆರೆ ಸಿಗದೆ ಇದ್ದಿದ್ದರೇ, ಕಾಂಗ್ರೆಸ್(Congress) ಪಕ್ಷ ಇದನ್ನು ಹಿಂದೂ ಭಯೋತ್ಪಾದನೆ ಎಂದು ಬೊಬ್ಬೆ ಹೊಡೆಯುತ್ತಿತ್ತು ಎಂದು ಆರೋಪಿಸಿದೆ.

https://youtu.be/alG5qdTNxzk ಮಣ್ಣಿಲ್ಲದೆ ಚಿನ್ನದ ಬೆಳೆ ಬೆಳದ ರೈತ | ಮಣ್ಣಿಲ್ಲದೆಯೇ ಕೃಷಿ !

ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮತದಾರರ ಮಾಹಿತಿ ಕಳ್ಳತನ ದೇಶದಲ್ಲಿ ಯಾರ ಕಾಲದಲ್ಲೂ ಆಗಿಲ್ಲ, ಆದರೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ. ಇದು ರಾಜ್ಯದ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದ್ದು, ಅತ್ಯಂತ ಗಂಭೀರ ಅಪರಾಧವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು.

ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ(Resign) ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Exit mobile version