- ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆ ಬೇಡ: ಕೇರಳ ಸರ್ಕಾರಕ್ಕೆ (siddaramaiah vs pinarayi vijayan) ಸಿಎಂ ಸಿದ್ದರಾಮಯ್ಯ ಆಗ್ರಹ
- ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ ಬೇಡ, ಕಾಸರಗೋಡು ಕನ್ನಡಿಗರ ಜೊತೆ ನಿಲ್ಲುವ ಭರವಸೆ ನೀಡಿದ ಸಿಎಂ
- ಮಲಯಾಳ ಭಾಷಾ ಮಸೂದೆ ಹಿಂಪಡೆಯದಿದ್ದರೆ ಕನ್ನಡಿಗರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಣೆ
Bengaluru: ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿರುವ (siddaramaiah vs pinarayi vijayan) ‘ಮಲಯಾಳ ಭಾಷಾ ಮಸೂದೆ–2025’ ರಾಜ್ಯಾಂತರ ಭಾಷಾ ವಿವಾದಕ್ಕೆ ಹೊಸ ತಿರುವು ನೀಡಿದೆ.
ಈ ಮಸೂದೆ ಕಾಸರಗೋಡು ಜಿಲ್ಲೆಯ ಕನ್ನಡಿಗರ ಭಾಷಾ ಹಕ್ಕುಗಳಿಗೆ ಗಂಭೀರ ಧಕ್ಕೆ ತರುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ (Malayalam) ಕಲಿಕೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆ ಸಂವಿಧಾನಾತ್ಮಕ ಭಾಷಾ ಸ್ವಾತಂತ್ರ್ಯದ ಮೇಲೆ ನೇರ ದಾಳಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ (siddaramaiah vs pinarayi vijayan) ಸಿದ್ದರಾಮಯ್ಯ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರಿಗೆ ಸ್ಪಷ್ಟ ಮತ್ತು ಕಠಿಣ ಸಂದೇಶವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ರವಾನಿಸಿದ್ದಾರೆ.
ಕಾಸರಗೋಡು ಕನ್ನಡಿಗರ ಹಿತವನ್ನು ಕಡೆಗಣಿಸಿ ಯಾವುದೇ ನಿರ್ಣಯ ಕೈಗೊಂಡರೆ, ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲದೊಂದಿಗೆ ಅವರ ಜೊತೆಗೆ ನಿಲ್ಲಲಿದೆ ಎಂಬ ಭರವಸೆಯನ್ನೂ ನೀಡಿದ್ದಾರೆ.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವ ಹಕ್ಕನ್ನು ನೀಡಿದೆ ಎಂಬುದನ್ನು ಸಿದ್ದರಾಮಯ್ಯ ಅವರು ಒತ್ತಿ ಹೇಳಿದ್ದಾರೆ.
ಕೇರಳ ಸರ್ಕಾರದ ಈ ಮಸೂದೆ ಸಂವಿಧಾನದ 29 ಮತ್ತು 30ನೇ ವಿಧಿಗಳ ಆತ್ಮಕ್ಕೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದ್ದಾರೆ. ಗಡಿಭಾಗದ ಜಿಲ್ಲೆಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರು ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿಯನ್ನು ರಕ್ಷಿಸಿಕೊಳ್ಳುವ ಹಕ್ಕು ಹೊಂದಿದ್ದಾರೆ.
ಆದರೆ ಮಲಯಾಳ ಭಾಷಾ ಮಸೂದೆ ಜಾರಿಯಾದರೆ, ಕಾಸರಗೋಡು (Kasaragod) ಜಿಲ್ಲೆಯ ಸಾವಿರಾರು ಕನ್ನಡಿಗ ಮಕ್ಕಳು ತಮ್ಮ ಮಾತೃಭಾಷೆಯಲ್ಲಿ ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.
ಭಾಷೆ ಕೇವಲ ಸಂವಹನದ ಸಾಧನವಲ್ಲ, ಅದು ಒಂದು ಸಮುದಾಯದ ಅಸ್ತಿತ್ವ ಮತ್ತು ಗೌರವದ ಸಂಕೇತವಾಗಿದ್ದು, ಅದನ್ನು ಹತ್ತಿಕ್ಕುವ ಯಾವುದೇ ಕ್ರಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಸರಗೋಡು ಜಿಲ್ಲೆ ಆಡಳಿತಾತ್ಮಕವಾಗಿ ಕೇರಳದ ಭಾಗವಾಗಿದ್ದರೂ, ಭಾವನಾತ್ಮಕವಾಗಿ ಅದು ಕರ್ನಾಟಕದೊಂದಿಗೆ ಆಳವಾದ ಸಂಬಂಧ ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲಿನ ಜನರ ದೈನಂದಿನ ಬದುಕು, ಸಂಸ್ಕೃತಿ, ಸಾಹಿತ್ಯ ಮತ್ತು ಸಾಮಾಜಿಕ ಸಂಬಂಧಗಳು ಕನ್ನಡ ಭಾಷೆಯೊಂದಿಗೆ ಗಾಢವಾಗಿ ಬೆಸೆದುಕೊಂಡಿವೆ.
ಹಲವು ತಲೆಮಾರುಗಳಿಂದ ಕಾಸರಗೋಡು ಜಿಲ್ಲೆಯ ಜನ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದು, ಇಂದು ಕೂಡ ಬಹುಸಂಖ್ಯಾತ ವಿದ್ಯಾರ್ಥಿಗಳು ಕನ್ನಡದಲ್ಲೇ ಕಲಿಯಲು ಇಚ್ಛಿಸುತ್ತಿದ್ದಾರೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದ್ದಾರೆ.
ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ.
ಇಂತಹ ಸಂದರ್ಭದಲ್ಲಿ ಅವರ ಮೇಲೆ ಅನ್ಯಭಾಷೆಯನ್ನು ಬಲವಂತವಾಗಿ ಹೇರುವ ಪ್ರಯತ್ನವು ಸಾಮಾಜಿಕ ಅಸಮಾಧಾನ ಮತ್ತು ಅಸಮಾನತೆಯನ್ನು ಹುಟ್ಟುಹಾಕಲಿದೆ ಎಂಬ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ಭಾರತವು ಬಹುಭಾಷಾ, ಬಹುಸಂಸ್ಕೃತಿ ಮತ್ತು ಬಹುಧರ್ಮಗಳ ನಾಡು ಎಂಬುದನ್ನು ಸಿದ್ದರಾಮಯ್ಯ ನೆನಪಿಸಿದರು. ಇಲ್ಲಿ ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ಶತ್ರುವಲ್ಲ.
ಕನ್ನಡವನ್ನು ಕರ್ನಾಟಕದಲ್ಲಿ ನಾವು ಹೇಗೆ ಸಂರಕ್ಷಿಸುತ್ತೇವೋ, ಅದೇ ರೀತಿ ಮಲಯಾಳಂ ಭಾಷೆಯನ್ನು ಕೇರಳದಲ್ಲಿ ಬೆಳೆಸುವ ಸಂಪೂರ್ಣ ಹಕ್ಕು ಅಲ್ಲಿನ ಸರ್ಕಾರಕ್ಕಿದೆ.
ಆದರೆ ಭಾಷಾ ಸಂರಕ್ಷಣೆಯ ಹೆಸರಿನಲ್ಲಿ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಸಲ್ಲದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದಾಗ ಅವರ ಕಲಿಕೆ ಸಾಮರ್ಥ್ಯ ಹೆಚ್ಚುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಈ ಹಿನ್ನಲೆಯಲ್ಲಿ, ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯೇ ಶಿಕ್ಷಣದ ಮಾಧ್ಯಮವಾಗಬೇಕು ಎಂಬ ಸಂವಿಧಾನದ (Constitution) 350(ಎ) ಮತ್ತು 350(ಬಿ) ವಿಧಿಗಳ ಮಹತ್ವವನ್ನು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲಯಾಳ ಭಾಷಾ ಮಸೂದೆ–2025 ಅನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಪಿಣರಾಯಿ ವಿಜಯನ್ ಅವರಿಗೆ ಆಗ್ರಹಿಸಿದ್ದಾರೆ.
ಭಾಷಾ ಅಲ್ಪಸಂಖ್ಯಾತರ ಹಿತ ರಕ್ಷಣೆಯಲ್ಲಿ ಯಾವುದೇ ಸರ್ಕಾರ ರಾಜಿ ಮಾಡಿಕೊಳ್ಳಬಾರದು ಎಂಬುದು ಅವರ ಸ್ಪಷ್ಟ ನಿಲುವಾಗಿದೆ.
ಒಂದು ವೇಳೆ ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೆ ತಂದರೆ, ಕಾಸರಗೋಡು ಕನ್ನಡಿಗರು ಅದನ್ನು ಒಗ್ಗಟ್ಟಿನಿಂದ ವಿರೋಧಿಸುವುದು ಖಚಿತವಾಗಿದ್ದು,
ಕರ್ನಾಟಕ ಸರ್ಕಾರ ಅವರ ಭಾಷಾ ಹಕ್ಕುಗಳ ರಕ್ಷಣೆಗೆ ಸರ್ವ ರೀತಿಯ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಈ ಮೂಲಕ, ಕಾಸರಗೋಡು ಕನ್ನಡಿಗರ ಪರ ನಿಂತಿರುವ ಸಿದ್ದರಾಮಯ್ಯ ಅವರ ನಿಲುವು ರಾಜ್ಯಾಂತರ ಭಾಷಾ ಹಕ್ಕುಗಳ ಚರ್ಚೆಗೆ ಹೊಸ ಆಯಾಮ ನೀಡಿದೆ.
ಇದನ್ನು ಓದಿ : https://vijayatimes.com/mahindra-new-electric-suv/