Bangalore : ಲಿಂಗಾಯತ ಸಮುದಾಯದ ಪ್ರಬಲ ನಾಯಕ ಮತ್ತು ಬಿಜೆಪಿಯ (BJP) ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ವಿಜಯೇಂದ್ರ(siddaramaiah Vs Vijayendra) ಅವರನ್ನು ಕಣಕ್ಕಿಳಿಸುವ ಸುಳಿವು ನೀಡಿದ್ದಾರೆ.

ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ವಿಜಯೇಂದ್ರ (Vijayendra) ಅವರನ್ನು ಕಣಕ್ಕಿಳಿಸುತ್ತೀರಾ? ಎಂಬ ಪ್ರಶ್ನೆಗೆ, ಕಣಕ್ಕಿಳಿಸುವ ಸಾಧ್ಯತೆಯನ್ನು ಅಲ್ಲಗಳೆಯದ ಯಡಿಯೂರಪ್ಪ,
“ಮಾತುಕತೆ ನಡೆಯುತ್ತಿದೆ, ಇದು ಕೇಂದ್ರ ನಾಯಕತ್ವದ ನಿರ್ಧಾರವನ್ನು ಅವಲಂಬಿಸಿರುತ್ತದೆ.
ಆದರೆ ನಾವು ಪ್ರಬಲ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಾಂಗ್ರೆಸ್ಗೆ ಕಠಿಣ ಹೋರಾಟ ನೀಡುತ್ತೇವೆ. ಮುಂದೆ ಏನಾಗುತ್ತದೆ ಎಂದು ನೋಡೋಣ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ ನಾವು ಸಂಪೂರ್ಣ ಬಹುಮತ ಪಡೆಯಲಿದ್ದೇವೆ.
ಇದನ್ನೂ ಓದಿ : https://vijayatimes.com/hebbal-assembly-constituency/
ಪ್ರಧಾನಿ ಮೋದಿಯವರ (Narendra modi) ನೇತೃತ್ವದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಭ್ರಷ್ಟವಾಗಿದೆ ಮತ್ತು ಅದಕ್ಕಾಗಿಯೇ ಅವರು 40% ಕಮಿಷನ್ ಎಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ,
ಈ ವಿಷಯಗಳನ್ನು ಮತದಾರರು ನಂಬುವುದಿಲ್ಲ. ಇನ್ನು ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ.
ನನಗೆ ಈಗಾಗಲೇ 80 ವರ್ಷ ದಾಟಿದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವರ್ಷ ದಾಟಿದರೂ ಈ ಬಾರಿ ಮಾತ್ರವಲ್ಲ (siddaramaiah Vs Vijayendra) ಮುಂದಿನ ಬಾರಿಯೂ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಅವರು ಹೇಳಿದರು.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ (Lingayat community) ಮತಬ್ಯಾಂಕ್ ಪ್ರಬಲವಾಗಿದೆ.

ಯಡಿಯೂರಪ್ಪನವರ ಕಿರಿಯ ಪುತ್ರ ವಿಜಯೇಂದ್ರ ಇಲ್ಲಿಂದ ಸ್ಪರ್ಧೆ ಮಾಡಿದರೆ, ಸಿದ್ದರಾಮಯ್ಯನವರನ್ನು ಕಟ್ಟಿಹಾಕಬಹುದು ಎಂಬುದು ಬಿಜೆಪಿ (BJP) ನಾಯಕರ ಲೆಕ್ಕಾಚಾರ.
ಈಗಾಗಲೇ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರರನ್ನು ಕಣಕ್ಕಿಳಿಸುವ ಕುರಿತು ವಿವಿಧ ರೀತಿಯ ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ.
ಸಿದ್ದರಾಮಯ್ಯನವರನ್ನು ಸೋಲಿಸಲು ಬೇಕಾದ ಜಾತಿ ಸಮೀಕರಣ ಈ ಕ್ಷೇತ್ರದಲ್ಲಿ ನಡೆಯುತ್ತಾ, ಜೆಡಿಎಸ್ನೊಂದಿಗೆ (JDS)ಒಳಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ,
ಒಕ್ಕಲಿಗ ಮತ್ತು ಲಿಂಗಾಯತ ಸಮೀಕರಣಗಳ ಕುರಿತು ಬಿಜೆಪಿ ನಾಯಕರು ಚಿಂತನೆ ನಡೆಸಿದ್ಧಾರೆ ಎನ್ನಲಾಗಿದೆ. ಇನ್ನೊಂದು ವಾರದಲ್ಲಿ ವರುಣಾದಿಂದ ವಿಜಯೇಂದ್ರರನ್ನು ಕಣಕ್ಕಿಳಿಸುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.