Bengaluru: ಹಿಜಾಬ್ ನಿಷೇಧವು ಬಿಜೆಪಿ ಸರ್ಕಾರದ (Siddaramaiah withdrew hijab ban) ಅವಧಿಯಲ್ಲಿ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ವಿಧಾನಸಭೆ ಚುನಾವಣೆಯಲ್ಲೂ ಹಿಜಾಬ್
ಪ್ರಮುಖ ಅಸ್ತ್ರವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್ (Congress) ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ
ಬಂದರೆ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದು, ಅದರಂತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.
ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ (Udupi) ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ
ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು.ಈ ನಡುವೆ ರಾಜ್ಯ ಸರ್ಕಾರದ ತೀರ್ಮಾಣವನ್ನು ಹೈಕೋರ್ಟ್ (High Court) ಕೂಡಾ ಎತ್ತಿ ಹಿಡಿದಿತ್ತು.
ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್
ನಿಷೇಧ ವಾಪಸ್ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ (Mysore) ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು ಉಡುಪು ಆಹಾರ ಅವರವರ ಇಷ್ಟ ಎಂದು ಪ್ರತಿಪಾದನೆ ಮಾಡಿದ್ದಾರೆ.
ಹಿಜಾಬ್ ನಿಷೇಧದ ಅರ್ಜಿ ಸುಪ್ರಿಂ ಕೋರ್ಟ್ನಲ್ಲಿದೆ. 2022 ರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಿಜಾಬ್ ನಿಷೇಧದ ಸಿಂಧುತ್ವದ ಬಗ್ಗೆ ಭಿನ್ನ ತೀರ್ಪು ನೀಡಿ, ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ
ವರ್ಗಾಯಿಸಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಾವು ಹಿಜಾಬ್ (Siddaramaiah withdrew hijab ban) ನಿಷೇಧದ ಆದೇಶವನ್ನು ವಾಪಸ್ ಪಡೆದುಕೊಳ್ಳುತ್ತೇವೆ.
ಇನ್ನು ಮುಂದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು. ಉಡುಪು ಆಹಾರ ಪದ್ದತಿ ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ಎಂದು ಪ್ರಶ್ನಿಸಿದ್ದಾರೆ. ನೀವು ಬಯಸಿದ ಉಡುಪನ್ನು ಧರಿಸಿ,
ನಿಮಗೆ ಬೇಕಾದನ್ನು ತಿನ್ನಿ, ನನಗೆ ಬೇಕನಿಸಿದ್ದನ್ನು ನಾನು ತಿನ್ನುವೆ. ಉಡುಪು ಆಹಾರ ಅವರರವ ಇಷ್ಟ ಎಂದು ಹೇಳಿದ್ದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಡೆಯ ಹಿಂದೆ ರಾಜಕೀಯ ಉದ್ದೇಶವೂ ಇದೆ.
ಕಳೆದ ಚುನಾವಣೆಯಲ್ಲಿ ಮುಸ್ಲಿಂ ಮತಗಳ ಕ್ರೊಡೀಕರಣದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ (Lok Sabha Elections) ಇದೇ ತಂತ್ರಗಾರಿಕೆಯನ್ನು ಪ್ರಯೋಗ ಮಾಡುವ ಉದ್ದೇಶ ಇದೆ ಎಂಬ
ವ್ಯಾಖ್ಯಾನಗಳು ವ್ಯಕ್ತವಾಗುತ್ತಿದೆ.
ಇದನ್ನು ಓದಿ: ಮಹಿಳಾ ಅಥ್ಲೀಟ್ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್
- ಭವ್ಯಶ್ರೀ ಆರ್ ಜೆ