ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್ ಬರಬೇಕು: ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡ ಅಭಿಮಾನಿಗೆ ಮಾಜಿ ಸಿಎಂ, ರಾಕಿಂಗ್ ಸ್ಟಾರ್ ಸ್ಪಂದನೆ

ಮಂಡ್ಯ,ಫೆ.18 : “ನನ್ನ ಅಂತ್ಯಕ್ರಿಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ಆಗಮಿಸಬೇಕು” ಎಂಬ ಕೋರಿಕೆಯ ಡೆತ್‌ನೋಟ್‌ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದ ಕೃಷ್ಣ (24) ಮೃತ ಯುವಕ. ನನ್ನ ಅಂತ್ಯಕ್ರಿಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್‌ ಆಗಮಿಸಬೇಕು. ಏಕೆಂದರೆ, ನಾನು ಇವರಿಬ್ಬರ ಅಪ್ಪಟ ಅಭಿಮಾನಿʼ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ವಿಷಯ ತಿಳಿದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ, ಮೃತ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಈ ನಡುವೆ ತಮ್ಮ ಅಭಿಮಾನಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ರಾಕಿಂಗ್ ಸ್ಟಾರ್ ಯಶ್, “ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ…” ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ…
ಓಂ ಶಾಂತಿ… ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Exit mobile version