‘ಸಿದ್ದರಾಮೋತ್ಸವ’ಕ್ಕೆ ರಾಹುಲ್ ಗಾಂಧಿಯನ್ನು ಆಹ್ವಾನಿಸಲು ಸಿದ್ದರಾಮಯ್ಯ ನಿರ್ಧಾರ

Congress

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಆಗಸ್ಟ್ 3ರಂದು ದಾವಣಗೆರೆಯಲ್ಲಿ(Davangere) ನಡೆಯಲಿರುವ ‘ಸಿದ್ದರಾಮೋತ್ಸವ’ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಆಹ್ವಾನಿಸಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಎರಡು ದಿನದ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರು ರಾಹುಲ್ ಗಾಂಧಿ ಅವರಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ.

ಏನಿದು ಸಿದ್ದರಾಮೋತ್ಸವ? : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗಸ್ಟ್ 12 ರಂದು 75ನೇ ವರ್ಷದ ಹುಟ್ಟುಹಬ್ಬ. ಹೀಗಾಗಿ ಸಿದ್ದರಾಮಯ್ಯ ಅವರ ಬೆಂಬಲಿಗರು ಆಗಸ್ಟ್ 3 ರಂದು ದಾವಣಗೆರೆಯಲ್ಲಿ ‘ಸಿದ್ದರಾಮೋತ್ಸವ’ ಹೆಸರಿನಲ್ಲಿ ಕಾರ್ಯಕ್ರಮವನ್ನು ನಡೆಸಲು ತಯಾರಿ ನಡೆಸಿದ್ದಾರೆ. ಸುಮಾರು 5 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಕಾರ್ಯಕ್ರಮಕ್ಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಸೇರಿದಂತೆ ಅನೇಕ ಹೈಕಮಾಂಡ್ ನಾಯಕರನ್ನು ಕರೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಬೇಕೆಂದು ನಿರ್ಧರಿಸಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯ ಅವರು ಮಾತ್ರ ಇರಬೇಕೆಂದು ಪಟ್ಟುಹಿಡಿದಿದ್ದರು. ಆದರೆ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ನಾಯಕರನ್ನು ಆಹ್ವಾನಿಸಬೇಕು ಎಂದು ಒತ್ತಾಯಿಸಿದ್ದರು. ಹೀಗಾಗಿ ಎಲ್ಲ ನಾಯಕರನ್ನ ವೇದಿಕೆ ಮೇಲೆ ಕೂರಿಸಿಕೊಂಡೆ ಶಕ್ತಿ ಪ್ರದರ್ಶನ ಮಾಡಲು ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರೆ. ಹೀಗಾಗಿ ದೆಹಲಿಗೆ ತೆರಳಿ ಅನೇಕ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.

Exit mobile version