ಬೆಂಗಳೂರು, ಡಿ. 28: ‘ಹನುಮ ಜಯಂತಿ’ ಬಗ್ಗೆ ಲಘುವಾಗಿ ಮಾತನಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ, ಈ ನೆಲದ ನಂಬಿಕೆಗೆ ಅವಮಾನ ಮಾಡಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಅಣ್ಣಾ, ಇವತ್ತು ಹನುಮ ಜಯಂತಿ” ಎಂದು ನೆನಪಿಸಿದ ಗ್ರಾಮಸ್ಥನಿಗೆ, “ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು”
ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು.
ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ ಎಂದು ಟೀಕಿಸಿದ್ದಾರೆ.
ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು.
— S.Suresh Kumar (@nimmasuresh) December 28, 2020
ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ "ಶ್ರೀ ರಾಮನ birth certificate ಎಲ್ಲಿ" ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ.