ಸಿದ್ದರಾಮಯ್ಯ ವಿರುದ್ಧ ನಿಲ್ಲದ ಕೊಡವರ ಆಕ್ರೋಶ: ಮಾಜಿ ಸಿಎಂ ವಿರುದ್ಧ ದೂರು ದಾಖಲು

ಮಡಿಕೇರಿ, ಡಿ. 21: ಕೊಡವರು ಗೋಮಾಂಸ ಸೇವಿಸುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೊಡವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಅವರು ಕೊಡವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವುದಲ್ಲದೆ ಕೋಮು ಗಲಭೆ ಸೃಷ್ಟಿಸುವುದಕ್ಕಾಗಿ ಉದ್ದೇಶಪೂರ್ವಕವಾಗಿ ಕೊಡವರ ವಿರುದ್ಧ ಸುಳ್ಳು ಭಾಷಣ ಮಾಡಿ ಪ್ರಚೋದನೆ ನೀಡಿದ್ದಾರೆ ಎಂದು ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Exit mobile version