Lucknow : ಕೇರಳ(Kerala) ಮೂಲದ ಪತ್ರಕರ್ತ(Journalist) ಸಿದ್ದಿಕ್ ಕಪ್ಪನ್(Siddique Kappan) ಅವರಿಗೆ ಸುಪ್ರೀಂಕೋರ್ಟ್(Supremecourt) ಕೆಲ ದಿನಗಳ ಹಿಂದೆ ಷರತ್ತುಬದ್ದ ಜಾಮೀನು(Bail) ಮಂಜೂರು ಮಾಡಿತ್ತು. ಆದರೆ ಇದೀಗ ಮತ್ತೊಂದು ಪ್ರಕರಣದಲ್ಲಿ ಅವರು ಮತ್ತೆ ಜೈಲಿನಲ್ಲಿಯೇ ಮುಂದುವರೆಯಲಿದ್ದಾರೆ ಎನ್ನಲಾಗಿದೆ.

ಪತ್ರಕರ್ತ ಸಿದ್ದಿಕ್ ಕಪ್ಪನ್ ವಿರುದ್ದ ಜಾರಿ ನಿರ್ದೇಶನಾಲಯ(ED) ತನಿಖೆ ನಡೆಸುತ್ತಿದೆ. ಹೀಗಾಗಿ ಅವರನ್ನು ಬಿಡುಗಡೆ ಮಾಡದಂತೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಸಿದ್ದಿಕ್ ಕಪ್ಪನ್ಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯವಿಲ್ಲ.
ಇದನ್ನೂ ಓದಿ : https://vijayatimes.com/state-bjp-counter-attack-to-siddaramaiah/
2020ರ ಅಕ್ಟೋಬರ್ನಲ್ಲಿ ದಲಿತ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾದ ನಂತರ ಉತ್ತರ ಪ್ರದೇಶದ(Uttarpradesh) ಹತ್ರಾಸ್ಗೆ(Hathras) ತೆರಳುತ್ತಿದ್ದಾಗ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಪಿತೂರಿಯ ಭಾಗವಾಗಿದ್ದ ಆರೋಪದ ಮೇಲೆ ಪತ್ರಕರ್ತ ಸಿದ್ದಿಕ್ ಕಪ್ಪನ್,
ಅತಿಕುರ್ ರೆಹಮಾನ್, ಆಲಂ ಮತ್ತು ಮಸೂದ್ ಅವರನ್ನು ಮಥುರಾದಲ್ಲಿ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇನ್ನು ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 1 ಲಕ್ಷ ರೂಪಾಯಿಗಳ ಎರಡು ಶ್ಯೂರಿಟಿ ಮತ್ತು ಅದೇ ಮೊತ್ತದ ವೈಯಕ್ತಿಕ ಬಾಂಡ್ ಅನ್ನು ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿತ್ತು. ಜಾಮೀನಿಗೆ ಹಲವಾರು ಷರತ್ತುಗಳನ್ನು ವಿಧಿಸಿದ್ದು,
ಜೈಲಿನಿಂದ ಬಿಡುಗಡೆಯಾದ ನಂತರ ಮುಂದಿನ ಆರು ವಾರಗಳವರೆಗೆ ದೆಹಲಿಯಲ್ಲೇ ಇರಬೇಕು ಮತ್ತು ರಾಷ್ಟ್ರೀಯ ನಿಜಾಮುದ್ದೀನ್ ಪೊಲೀಸ್ ಠಾಣೆಗೆ ವರದಿ ಸಲ್ಲಿಸಬೇಕು ಎಂದು ಷರತ್ತು ವಿಧಿಸಲಾಗಿತ್ತು. ಕಪ್ಪನ್ಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ಆದೇಶವನ್ನು ವಿರೋಧ ಪಕ್ಷಗಳು ಸ್ವಾಗತಿಸಿದ್ದವು. ಆದರೆ ಇದೀಗ ಮತ್ತೊಂದು ಪ್ರಕರಣದಲ್ಲಿ ಅವರನ್ನು ಮತ್ತೆ ಬಂಧಿಸಲಾಗಿದೆ.