ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ನಿಷೇಧ

ಬೆಂಗಳೂರು ಡಿ  28: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಸೂದೆಯು ಏಕಪಕ್ಷೀಯವಾಗಿದೆ.  ರಾಜ್ಯದಲ್ಲಿ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿದ ಮತಾಂತರ ನಿಷೇಧ ಕಾಯ್ದೆ’ ಯನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಜನಾಕ್ರೋಶಕ್ಕೆ ಮಣಿಯದೆ  ಬಿಜೆಪಿಯನ್ನು ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದಾಗ ಅದನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವೇ ಇಲ್ಲ  ಎಂದು ಆಶ್ವಾಸನೆ ನೀಡಿದ್ದಾರೆ.

ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಬಿಜೆಪಿ ಆರೋಪಿಸಿದೆ ಆದರೆ ಮತಾಂತರ ನಿಷೇಧ ಕಾಯ್ದೆ ಜಾರಿ ಯಡಿಯೂರಪ್ಪ ಮತ್ತು ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Exit mobile version