ಹಿಂದಿ ಕಿರುತೆರೆ ನಟ, ಬಿಗ್ ಬಾಸ್‌ 13 ವಿಜೇತ ಸಿದ್ದಾರ್ಥ್ ಶುಕ್ಲಾ ನಿಧನ

ಮುಂಬೈ ಸೆ 2 : ಬಿಗ್‌ ಬಾಸ್‌ 13 ವಿಜೇತ ಹಾಗೂ ಹಿಂದಿ ಕಿರುತೆರೆಯ ಪ್ರಖ್ಯಾತ ನಟ ಸಿದ್ದಾರ್ಥ್ಶ ಶುಕ್ಲಾ ಹೃದಯಾಘಾತದಿಂದ ಮೃತಟ್ಟಿದ್ದಾರೆ

40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅವರಿಗೆ ಗುರುವಾರ ಬೆಳಗ್ಗೆ ತೀವ್ರ ಎದೆನೋವು ಉಂಟಾದ ಕಾರಣ ಅವರನ್ನು ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಿದ್ದಾರ್ಥ್ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಿದ್ದಾರ್ಥ್ ಶುಕ್ಲಾ 1980ರ ಡಿಸೆಂಬರ್ 12ರಂದು ಮುಂಬೈನಲ್ಲಿ ಜನಿಸಿದ್ದರು, ಸಿದ್ಧಾರ್ಥ್ ಶುಕ್ಲಾರ ತಂದೆ, ತಾಯಿ ಮೂಲತಂ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವರು. ಮಾಡೆಲ್‌ ಆಗಿ ವೃತ್ತಿ ಜೀವನ ಆರಂಭಿಸಿದ ಇವರು 2004 ರಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದ ಅವರು ಬಾಲಿಕಾ ವಧು, ಬಾಬುಲ್ ಕಾ ಆಂಗನ್ ಛೋಟೆ ನಾ ಸೇರಿದಂತೆ ಹಲವು ಧಾರವಾಹಿಯಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದರು.ನಂತರ ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ ಚಿತ್ರದಲ್ಲಿಯೂ ಕೂಡ ಕಾಣಿಸಿಕೊಂಡಿದ್ದ ಅವರು ಹಿಂದಿ ಅವತರಿಣೆಕೆ ಬಿಗ್ ಬಾಸ್ 13ರಲ್ಲಿ ವಿಜಯಶಾಲಿಯಾಗಿದ್ದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.