ಸರಿಗಮಪ ಖ್ಯಾತಿಯ ಸಿಂಗರ್ ಪೊಲೀಸ್ ಸುಬ್ರಮಣಿ ಪತ್ನಿ ಕೊರೊ‌ನಾಗೆ ಬಲಿ

ಬೆಂಗಳೂರು, ಮೇ. 11: ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮದಲ್ಲಿ ಖ್ಯಾತಿ ಪಡೆದಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಅವರ ಪತ್ನಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆ ಸುಬ್ರಮಣಿ ಪತ್ನಿಯವರಿಗೆ ಕೊರೊನಾ ಧೃಡಪಟ್ಟಿದ್ದು, ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ಬೆಂಗಳೂರಿನಲ್ಲಿ ಆಸ್ಪತ್ರೆಗಳನ್ನು ಸುತ್ತಾಡಿದ್ದರು. ಆದರೂ ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ.

ಕೊನೆಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಸೋಮವಾರ ಚಿಕಿತ್ಸೆ ಫಲಾಕಾರಿಯಾಗದೇ ಸುಬ್ರಮಣಿ ಪತ್ನಿ ಕೊನೆಯುಸಿರೆಳೆದಿದ್ದಾರೆ.

Exit mobile version