ಇಂದಿನಿಂದ ರಾಜ್ಯದಲ್ಲಿ (SIR process begins in karnataka) SIR ಪ್ರಕ್ರಿಯೆ ಆರಂಭ
ಜುಲೈ 29ರ ವರೆಗೆ BLOಗಳಿಂದ ಮನೆ ಮನೆ ಭೇಟಿ
ಸಾರ್ವಜನಿಕರಿಗೆ ಸಹಾಯವಾಣಿ ಕೂಡ ಆರಂಭ
Bengaluru : ರಾಜ್ಯದಲ್ಲಿ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಹಾಗೂ ಸಮಗ್ರಗೊಳಿಸುವ (SIR process begins in karnataka) ಉದ್ದೇಶದಿಂದ ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision is – SIR) ಕಾರ್ಯವನ್ನು ಇಂದಿನಿಂದ ಆರಂಭಿಸಿದೆ.
ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಈ ಅಭಿಯಾನದ ವೇಳೆ ಬೂತ್ ಮಟ್ಟದ ಅಧಿಕಾರಿಗಳು (BLO) ರಾಜ್ಯದಾದ್ಯಂತ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ.

ಹೊಸ ಮತದಾರರ ಹೆಸರು ಸೇರ್ಪಡೆ, ವಿಳಾಸ ಅಥವಾ ವೈಯಕ್ತಿಕ ಮಾಹಿತಿಯ (SIR process begins in karnataka) ತಿದ್ದುಪಡಿ, ಸ್ಥಳಾಂತರಗೊಂಡವರು ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯವನ್ನು ಇದೇ ಅವಧಿಯಲ್ಲಿ ಕೈಗೊಳ್ಳಲಾಗುತ್ತದೆ.
ಮತದಾನದ ಹಕ್ಕು ಸುಗಮವಾಗಿ ಉಳಿಸಿಕೊಳ್ಳಲು ಪ್ರತಿಯೊಬ್ಬ ಅರ್ಹ ನಾಗರಿಕರೂ ಈ ಪ್ರಕ್ರಿಯೆಗೆ ಸಹಕರಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.
ಮನೆಗೆ ಭೇಟಿ ನೀಡುವ ಅಧಿಕಾರಿಗಳು ಮತದಾರರಿಗೆ ಎಸ್‌ಐಆರ್ (SIR) ಅರ್ಜಿಯನ್ನು ನೀಡಲಿದ್ದು, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿಕೊಂಡು ದಾಖಲೆಗಳೊಂದಿಗೆ
ಸಲ್ಲಿಸಬೇಕಾಗುತ್ತದೆ. ಹೊಸದಾಗಿ 18 ವರ್ಷ ಪೂರ್ಣಗೊಳಿಸಿರುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬಹುದು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೂ ಹೆಸರು, ವಿಳಾಸ ಅಥವಾ ಇತರ ವಿವರಗಳಲ್ಲಿ ತಪ್ಪಿದ್ದರೆ ಅವುಗಳನ್ನು ಇದೇ ಸಂದರ್ಭದಲ್ಲಿ ತಿದ್ದುಪಡಿ ಮಾಡಿಸಬಹುದು.
ಒಂದುಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿರುವವರ ಮಾಹಿತಿ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಹೆಚ್ಚಿಸುವ ಉದ್ದೇಶವನ್ನು ಚುನಾವಣಾ ಆಯೋಗ ಹೊಂದಿದೆ.
ಈ ಪ್ರಕ್ರಿಯೆ ಸುಗಮವಾಗಿ ನಡೆಯಲು ಸಾರ್ವಜನಿಕರು ಕೆಲವು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ. ಕುಟುಂಬದ ಸದಸ್ಯರ ಗುರುತಿನ ದಾಖಲೆ, ಮತದಾರರ
ಗುರುತಿನ ಚೀಟಿ, ಆಧಾರ್ ಕಾರ್ಡ್ (Aadhar Card) , ವಾಸಸ್ಥಳದ ಪುರಾವೆ ಹಾಗೂ ಪಾಸ್‌ಪೋರ್ಟ್ (Passport) ಗಾತ್ರದ ಭಾವಚಿತ್ರವನ್ನು ಅಧಿಕಾರಿಗಳಿಗೆ ನೀಡಬೇಕಾಗುತ್ತದೆ.
ಅಧಿಕಾರಿಗಳು ನೀಡುವ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸಹಿ ಹಾಕಿದ ನಂತರವೇ ಸಲ್ಲಿಸಬೇಕು. ದಾಖಲೆಗಳ ಕೊರತೆ ಅಥವಾ ತಪ್ಪಾದ ಮಾಹಿತಿ ನೀಡುವುದರಿಂದ
ಅರ್ಜಿಯ ಪರಿಶೀಲನೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಂದು ಮಾಹಿತಿಯನ್ನೂ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸುವುದು ಅಗತ್ಯ.
ಅಧಿಕಾರಿಗಳು ಅಧಿಕೃತ ಗುರುತಿನ ಚೀಟಿಯೊಂದಿಗೆ ಮನೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ಅವರಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಸಹಾಯವಾಣಿ ಹಾಗೂ ದೂರು ಪರಿಹಾರ ಕೇಂದ್ರವನ್ನು ಆರಂಭಿಸಲಾಗಿದೆ.
ಯಲಹಂಕ, ಬ್ಯಾಟರಾಯನಪುರ (Batarayanapura) , ಯಶವಂತಪುರ, ದಾಸರಹಳ್ಳಿ, ಮಹದೇವಪುರ (Mahadevpur) , ಬೆಂಗಳೂರು ದಕ್ಷಿಣ ಹಾಗೂ ಆನೇಕಲ್
ವಿಧಾನಸಭಾ ಕ್ಷೇತ್ರಗಳ ಮತದಾರರು ತಮ್ಮ ಅನುಮಾನಗಳು ಅಥವಾ ದೂರುಗಳ ಕುರಿತು ಕಚೇರಿ ವೇಳೆಯಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಅಗತ್ಯವಿದ್ದರೆ ಇ-ಮೇಲ್ (E-Mail) ಅಥವಾ ಜಿಲ್ಲಾಡಳಿತದ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕವೂ ಸಂಪರ್ಕಿಸಿ ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ.
ಈ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಗೆ ತ್ವರಿತ ಮಾಹಿತಿ ಹಾಗೂ ಮಾರ್ಗದರ್ಶನ ದೊರೆಯುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಂತೆ ಜುಲೈ 29ರವರೆಗೆ ಮನೆ ಮನೆಗೆ ಮಾಹಿತಿ ಸಂಗ್ರಹಣೆ ನಡೆಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಹಾಗೂ ಸಲಹೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಬಳಿಕ ವಿಚಾರಣೆ ಮತ್ತು ಪರಿಶೀಲನೆ ನಡೆಸಿ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಹಕ್ಕಾದ ಮತದಾನದ ಹಕ್ಕು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿರುವುದರಿಂದ,
ಪ್ರತಿಯೊಬ್ಬ ಅರ್ಹ ನಾಗರಿಕರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.
ಇದನ್ನು ಓದಿ : https://vijayatimes.com/new-financial-rules-from-july/