ಹೆಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಮಹಿಳೆ ನಾಪತ್ತೆ, 40 ಕಡೆ ರೇಡ್ ನಡೆಸಿದ ಎಸ್‌ಐಟಿ

Bengaluru: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದೊಂದಿಗೆ (Prajwal Revanna Pendrive Case) ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕುರಿತಾಗಿ ಕೂಡ ಒಂದಿಷ್ಟು ಮಾಹಿತಿ ಹೊರಬಿದ್ದಿದ್ದು ಇದೀಗ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು ಎನ್ನಲಾದ ಮೈಸೂರು ಜಿಲ್ಲೆ ಕೆ.ಆರ್‌. ನಗರದ ಮಹಿಳೆಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

Special Investigation Team

ಈ ಸ್ಥಳದಲ್ಲಿ ಮಹಿಳೆ ಇದ್ದಾಳೆಯೇ ಎಂಬ ಶೋಧ ನಡೆಸಿದೆ ಈ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ (Mysore, Hassan, Mandya) ಜಿಲ್ಲೆಗಳು, ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಿದ್ದಾರೆ. ಇನ್ನು ಈ ಕುರಿತಾಗಿ ಹೆಚ್.ಡಿ.ರೇವಣ್ಣ (H D Revanna) ಅವರ ಹೊಳೆನರಸೀಪುರ, ಪಡುವಲಹಿಪ್ಪೆ, ಬೆಂಗಳೂರು ನಿವಾಸಿಗಳು, ತೋಟದ ಮನೆಗಳು, ರೇವಣ್ಣ ಅವರ ಸಂಬಂಧಿಕರು, ಸ್ನೇಹಿತರ ಮನೆಗಳು, ತೋಟದ ಮನೆಗಳು ಸೇರಿದಂತೆ ಸುಮಾರು 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿವೆ.

ಎಲ್ಲಿಯೂ ಸದ್ಯಕ್ಕೆ ಆ ಮಹಿಳೆಯ ಸುಳಿವು ಸಿಕ್ಕಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. ಮಹಿಳೆ ಅಪಹರಣ ಸಂಬಂಧ ಕೆ.ಆರ್‌.ನಗರ (K R Nagara) ಪೊಲೀಸ್‌ ಠಾಣೆಯಲ್ಲಿ ಮೇ 2ರ ರಾತ್ರಿ ಎಫ್‌ಐಆರ್‌ ದಾಖಲಾಗಿತ್ತು. ದೂರುದಾರರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಸತೀಶ್‌ ಬಾಬು (Sathish Babu) ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದರು.

ಈಗಾಗಲೇ ನಾಪತ್ತೆಯಾಗಿರುವ ಮಹಿಳೆಗೆ ಜೀವ ಬೆದರಿಕೆ ಇರುವ ಬಗ್ಗೆಯೂ ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ನಾಪತ್ತೆಯಾಗಿರುವ ಮಹಿಳೆ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಈ ಹಿಂದೆ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವೂ ಕೇಳಿ ಬಂದಿತ್ತು. ಹೀಗಾಗಿ ಈ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ. ಆ ಮಹಿಳೆಯ ಜೀವಕ್ಕೆ ಅಪಾಯ ಇರುವುದರಿಂದ ಎಸ್‌ಐಟಿ ಅಧಿಕಾರಿಗಳು ಮಹಿಳೆಯ ಪತ್ತೆಗಾಗಿ ರಾತ್ರೋರಾತ್ರಿ ಸುಮಾರು 25ಕ್ಕೂ ಅಧಿಕ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಿ ಎಲ್ಲೆಡೆ ತಲಾಶ್ ನಡೆಸಿದ್ದಾರೆ.

Exit mobile version