- ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ (Six Irrigation Projects)
- ಎತ್ತಿನಹೊಳೆ ಯೋಜನೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಶೇ. 25ರಷ್ಟು ಆರ್ಥಿಕ ಸಹಾಯ ನೀಡುವಂತೆ ಮನವಿ
- ಖಾತೆಗೆ ಹಣ ಬರುವವರೆಗೂ ಖಾತರಿ ಇಲ್ಲ
New delhi: ರಾಜ್ಯದ 6 ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ.
ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ (Central Govt) ಮನವಿ ಸಲ್ಲಿಸಿದ್ದೇವೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಾಗಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರು ನೀರಾವರಿ ಯೋಜನೆಗಳಾದ (Irrigation Scheme) ಸೊನ್ನತಿ ಏತ ನೀರಾವರಿ ಯೋಜನೆಗೆ 804.66 ಕೋಟಿ ರೂ.
ಯುಕೆಪಿಯ (UKP) ಇಂಡಿ ಶಾಖಾ ಕಾಲುವೆಗೆ 2,666.70 ಕೋಟಿ ರೂ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ 3,000 ಕೋಟಿ ರೂ.
ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ 1,444.42 ಕೋಟಿ ರೂ.
ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ 1,610 ಕೋಟಿ ರೂ. ಸೇರಿದಂತೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ (Appeal for grant) ಸಲ್ಲಿಸಿದ್ದೇವೆ.
ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ ಆದರೆ ನಮಗೆ ಇನ್ನು ಅಧಿಕೃತವಾಗಿ (Official) ತಿಳಿಸಿಲ್ಲ ಎಂದು ಹೇಳಿದರು.

ಇನ್ನು ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ.
ಈ ಯೋಜನೆ ಕಾಮಗಾರಿಯನ್ನು (Work) ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು.
ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು ಎಂದು ತಿಳಿಸಿದರು.
ಆದರೆ ತದ ನಂತರ ಅರಣ್ಯ ಇಲಾಖೆಯವರು (Forest Department) ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ.
ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ (Clearance Certificate) ನೀಡಬೇಕಿತ್ತು ಆದರೆ ಮಾಡಿಲ್ಲ ಕೆಲವು ತಕರಾರುಗಳನ್ನು ಹಾಕಿದ್ದಾರೆ.
ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿದೆ ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ.
ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು.
ಕೇಂದ್ರ ಸಚಿವರು (Union Minister) ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.
ಹಣ ನೀಡುತ್ತೇವೆ ಎಂದು ಹೇಳಿದ್ದಾರೆ, ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ,
ಇನ್ನು ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ (Power line) ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ.
ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ.
ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು (Union Environment Minister) ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ.
ಮುಂದಿನ ಸಂಸತ್ ಅಧಿವೇಶನ (Parliament Session) ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದರು.
ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ (BJP) ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು.
ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ, ಗೋವಾ ಸರ್ಕಾರ (Government Of Goa) 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಇದನ್ನು ಓದಿ : ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ನೀವು ಶೋಕಾಸ್ ನೋಟಿಸ್ (Showcause Notice) ನೀಡಲು ಬರುವುದಿಲ್ಲ ಎಂದು ಹೇಳಿದ್ದಾರೆ.
ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದಿದ್ದಾರೆ. (Six Irrigation Projects)