Bengaluru: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು (ಏ.29) ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಮೊನ್ನೆ ಅಂದ್ರೆ ಏಪ್ರಿಲ್ (April) 22ರಂದು ಅನಾರೋಗ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ (Bengaluru) ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ. ಎಸ್ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. 91 ವರ್ಷ ಆಗಿದ್ದರಿಂದ ಸ್ವಲ್ಪ ಜ್ವರ (Fever) ಬಂದರೂ ದೇಹ ತಡೆದುಕೊಳ್ಳುವುದಿಲ್ಲ. ಹೀಗಾಗಿ ಅವರು ಪದೇ ಪದೇ ಆಸ್ಪತ್ರಗೆ ದಾಖಲಾಗುತ್ತಿದ್ದಾರೆ.