ಮೈಸೂರು ಅ 7 : ನಗರದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾಡ ಹಬ್ಬ ದಸರಾಗೆ ಎಸ್. ಎಂ. ಕೃಷ್ಣ ಅವರಿಂದ ವಿದ್ಯುಕ್ತ ಚಾಲನೆ ದೊರೆತಿದೆ.
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿ ನಾಡಹಬ್ಬವನ್ನು ಉದ್ಘಾಟನೆ ಮಾಡಿದ್ದಾರೆ.
ಮನುಕುಲಕ್ಕೆ ಬಂದ ದೊಡ್ಡ ಗಂಡಾಂತರವಾದ ಕೊರೊನಾದಿಂದ ಎಲ್ಲರನ್ನೂ ಚಾಮುಂಡೇಶ್ವರಿ ಪಾರು ಮಾಡಲಿ’ ಎಂದು ಬಿಜೆಪಿ ನಾಯಕ ಎನ್.ಎಂ.ಕೃಷ್ಣ ಕೋರಿದರು.
ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಷ್ಟಕರವಾದ ಕಾಲದಲ್ಲಿ ಆರಂಭವಾದ ಉತ್ಸವ ಸುಲಲಿತವಾಗಿ ನಡೆಯಲಿ ದೇವೆಯ ಅಗ್ರಪೂಜೆಯೊಂದಿಗೆ ಆರಂಭವಾದ ದಸರಾ ಎಲ್ಲರಿಗೂ ಒಳಿತು ಮಾಡಲಿ ಎಂದರು.
ಹತ್ತು ಹನ್ನೆರಡು ವರ್ಷಗಳ ಬಾಲಕನಾಗಿದ್ದಾಗ ಮೈಸೂರಿಗೆ ನಮ್ಮಪ್ಪ ನನ್ನನ್ನು ಓದಲು ಕಳಿಸಿದರು, ಒಂಟಿಕೊಪ್ಪಲ್ ಮಿಡ್ಲ್ ಸ್ಕೂಲ್ ಮಹಾಜನ ಹೈಸ್ಕೂಲ್, ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತ ಮೈಸೂರು ಜೊತೆಯಲ್ಲೇ ಬೆಳೆದೆ, ಪ್ರತಿ ದಿನ ಬೆಟ್ಟದ ಕಡೆ ನೋಡಿ ಕೈ ಮುಗಿದು ಶಾಲೆಗೆ ಹೋಗುತ್ತಿದ್ದೆ ಎಂದು ಸ್ಮರಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಚಿವರಾದ ಸುನೀಲ್ ಕುಮಾರ್, ಆರ್. ಅಶೋಕ್, ಡಾ. ಕೆ. ಸುಧಾಕರ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ಇಂದಿನಿಂದ ದಸರಾ ಪ್ರಯುಕ್ತ ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಈಗಲೂ ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಈ ಕಾರ್ಯಕ್ರಮಗಳು ನಡೆಯಲಿವೆ. ಅ. 15 ಕ್ಕೆ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ನಡೆಯಲಿದೆ.