• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
0
SHARES
14
VIEWS
Share on FacebookShare on Twitter

ಜೂನ್ 18 ರಿಂದ ಬೇಕರಿ (Small shops bakeries closed) ಸೇರಿದಂತೆ ಸಣ್ಣ ಅಂಗಡಿಗಳು ಬಂದ್

ವಿವಿಧ ಸರ್ಕಾರಿ ಅಧಿಕಾರಿಗಳಿಂದ ದಂಡ ಹಾಗೂ ಕಿರುಕುಳ

ಪ್ಲಾಸ್ಟಿಕ್ ನಿಷೇಧದ ಹೆಸರಿನಲ್ಲಿ ತಾರತಮ್ಯದ ದಂಡ

Bengaluru : ರಾಜಧಾನಿಯಲ್ಲಿ ಜೂನ್‌ 18 ರಿಂದ ಬೀದಿ ಬದಿ (Small shops bakeries closed) ಹಾಗೂ ಸಣ್ಣ ಅಂಗಡಿಯ ವ್ಯಾಪಾರಿಗಳು ಪ್ರತಿಭಟನೆ ಆರಂಭಿಸಲಿದ್ದಾರೆ.

ಇದಕ್ಕೆ ಕಾರಣವೇನೆಂದರೆ, ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕಿರುಕುಳ ಹಾಗೂ ದಂಡದ ಹೆಸರಿನಲ್ಲಿ ಭಾರಿ ಮೊತ್ತದ ಶುಲ್ಕವನ್ನು ವ್ಯಾಪಾರಿಗಳ ಹೆಗಲಿಗೆ ಹೇರುತ್ತಿದ್ದಾರೆ. ಇದರಿಂದ ಬೇಸತ್ತಿದ್ದ ವ್ಯಾಪಾರಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ.

Small shops bakeries closed.

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷರಾದ ರವಿಶೆಟ್ಟಿ ಬೈಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಸಣ್ಣ ವ್ಯಾಪಾರಿಗಳು ಕಾನೂನುಬದ್ಧವಾಗಿ

ವ್ಯಾಪಾರ ಮಾಡುತ್ತಾ, ತೆರಿಗೆ ಪಾವತಿಸುತ್ತಿದ್ದರೂ ಸಹ ಅಧಿಕಾರಿಗಳಿಂದ ನಿರಂತರ ತಪಾಸಣೆ, ದಂಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ಬಳಸಿ, ವ್ಯಾಪಾರಿಗಳನ್ನು ತನಿಖೆಯ ಹೆಸರಿನಲ್ಲಿ ಕಚೇರಿಗೆ ಹಾಗೂ ಪೊಲೀಸ್ ಠಾಣೆಗೆ ಕರೆಸಿ ಅವರಲ್ಲಿ ಭಯ ಮೂಡಿಸುತ್ತಿದ್ದಾರೆ.

ಅಲ್ಲದೆ ಅವರನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ತೆರಿಗೆ ಕಟ್ಟಿ, ಸರ್ಕಾರದ ಎಲ್ಲಾ ನಿಯಮಗಳ ಅಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದರೂ ಸಹ ಕಾರಣವೇ ಇಲ್ಲದೆ ಸುಖಾಸುಮ್ಮನೆ ದಂಡ ವಿಧಿಸುವುದು ಎಷ್ಟು ಸರಿ ಎಂದು ವ್ಯಾಪಾರಿಗಳು ಪ್ರಶ್ನಿಸುತ್ತಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು (Plastic Cover) ಉತ್ಪಾದಿಸುವ ದೊಡ್ಡ ಸಂಸ್ಥೆಗಳು ಮತ್ತು ಸಗಟು ವ್ಯಾಪಾರಿಗಳನ್ನು ಬಿಟ್ಟು, ಸಣ್ಣ ಚಿಲ್ಲರೆ ವ್ಯಾಪಾರಿಗಳ ಮೇಲೆ ಅಧಿಕಾರಿಗಳು ಭಾರಿ ಮೊತ್ತದ ದಂಡ ಹೇರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ ಸರ್ಕಾರದಿಂದ ಅನುಮತಿ ಪಡೆದ ತಂಬಾಕು ಉತ್ಪನ್ನಗಳನ್ನು ಮಾರಾಟ (Small shops bakeries closed) ಮಾಡಿದರೂ ಸಹ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ವ್ಯಾಪಾರಿಗಳು ದೂರಿದ್ದಾರೆ.

ಈ ಹೋರಾಟಕ್ಕೆ ರಾಜ್ಯದ ಎಲ್ಲಾ ವ್ಯಾಪಾರಿಗಳು ಸಾಥ್ ನೀಡಿದ್ದು, “ನಮಗೆ ನ್ಯಾಯ ಸಿಗುವವರೆಗೂ ಈ ಹೋರಾಟವನ್ನು ನಿಲ್ಲಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಜೂನ್‌ 18 ರಿಂದ ಬೀದಿ ಬದಿ ಹಾಗೂ ಸಣ್ಣ ಅಂಗಡಿಯ ವ್ಯಾಪಾರಿಗಳ ಪ್ರತಿಭಟನೆ ಆರಂಭವಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ಭಾರಿ ಮಟ್ಟದ ತೊಂದರೆ ಉಂಟಾಗಲಿದೆ.

ಬೇಕರಿ, ಬಿಡ ಅಂಗಡಿ, ತರಕಾರಿ ಅಂಗಡಿ ಸೇರಿದಂತೆ ಚಿಕ್ಕಪುಟ್ಟ ಕಿರಾಣಿ ಅಂಗಡಿಗಳೂ ಮುಚ್ಚಲಿವೆ. ದಿನನಿತ್ಯದ ಬಳಕೆಯ ವಸ್ತುಗಳು ಸಿಗದೇ ಹೋದರೆ ಏನು ಮಾಡುವುದು ಎಂದು ಸಾಮಾನ್ಯ ಜನರು ಚಿಂತೆಗೆ ಈಡಾಗಿದ್ದಾರೆ.

ವ್ಯಾಪಾರಿಗಳು ಹಾಗೂ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷರಾದ ರವಿಶೆಟ್ಟಿ ಬೈಂದೂರು (Ravishetty Byndoor) ಅವರು, “ನಮ್ಮ ಈ ಹೋರಾಟಕ್ಕೆ ಕರ್ನಾಟಕದ ಇತರ ಭಾಗಗಳಲ್ಲಿಯೂ ಭಾಗಶಃ ಸಹಕಾರ ಸಿಗುವ ಸಾಧ್ಯತೆಯಿದೆ.

ನಮಗೆ ನ್ಯಾಯ ಸಿಗುವವರೆಗೂ ಮತ್ತು ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗುವವರೆಗೂ ಈ ಹೋರಾಟ ನಿಲ್ಲದು” ಎಂದು ಹೇಳಿದ್ದಾರೆ.

ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು, ತಪ್ಪು ಮಾಡಿದ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯನ್ನು ನೀಡಿ, ವ್ಯಾಪಾರಿಗಳಿಗೆ ನೆಮ್ಮದಿಯಿಂದ ಕೆಲಸ ಮಾಡಲು ಅನುಕೂಲ ಮಾಡಿಕೊಡಬೇಕಿದೆ.

ಇದನ್ನು ಓದಿ : https://vijayatimes.com/new-rules-for-elephant-camps/

Tags: bakerybengalurushopstrike

Related News

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026
ನಾಡಗೀತೆಯಲ್ಲಿ ಬದಲಾವಣೆಗೆ ಚಿಂತನೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಬೌದ್ಧ ಧರ್ಮದ ಉಲ್ಲೇಖ ಸೇರಿಸಲು ಸಮಿತಿ ಶಿಫಾರಸು
ಪ್ರಮುಖ ಸುದ್ದಿ

ನಾಡಗೀತೆಯಲ್ಲಿ ಬದಲಾವಣೆಗೆ ಚಿಂತನೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಬೌದ್ಧ ಧರ್ಮದ ಉಲ್ಲೇಖ ಸೇರಿಸಲು ಸಮಿತಿ ಶಿಫಾರಸು

July 15, 2026
ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ: ಎಐ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರದ ಘೋಷಣೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ: ಎಐ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರದ ಘೋಷಣೆ

July 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.