ICC ವರ್ಷದ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾದ ಸ್ಮೃತಿ ಮಂದಾನ

smritimandana

ಮುಂಬೈ ಜನವರಿ 25 : ಭಾರತದ ಮಹಿಳಾ ಕ್ರಿಕೆಟ್‌ ತಂಡದ ಭರವಸೆಯ ಯುವ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ವರ್ಷದ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸ್ಮೃತಿ ಮಂದಾನ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 38.86ರ ಸರಾಸರಿಯಲ್ಲಿ 855 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಐದು ಅರ್ಧ ಶತಕ ಬಾರಿಸಿದ್ದಾರೆ. 

ಎಲ್ಲಾ ಮಾದರಿಯಲ್ಲಿನ ಅದ್ಬುತ ಫಾರ್ಮ್‌ಗಾಗಿ ಭಾರತದ ಬ್ಯಾಟರ್ ಸ್ಮೃತಿ ಮಂದಾನ ಅವರು ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿಗೆ ಆಯ್ಕೆಯಾಗಿದ್ದಾರೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಪಿ.ವಿ. ಸಿಂಧುಗೆ ಒಲಿದ ಸಯ್ಯದ್‌ ಮೋದಿ ಬ್ಯಾಡ್ಮಿಟಂನ್‌ ಕಿರೀಟ

ಭಾರತದ ಶಟ್ಲರ್‌ ಪಿ.ವಿ. ಸಿಂಧು ಅವರು ಪ್ರತಿಷ್ಠಿತ ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ವಿಜಯಶಾಲಿಯಾಗಿದ್ದಾರೆ.  ಭಾನುವಾರ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ ಪಂದ್ಯದಲ್ಲಿ ಸಿಂಧು, ಭಾರತದವರೇ ಆದ ಮಾಳವಿಕ ಬನ್ಸೋದ್‌ ವಿರುದ್ಧ 21​-13, 21-​16 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. 26 ವರ್ಷದ ಸಿಂಧು ಕೇವಲ 35 ನಿಮಿಷಗಳಲ್ಲಿ ಪಂದ್ಯ ಗೆದ್ದು ಟ್ರೋಫಿಯನ್ನು ತನ್ನದಾಗಿಕೊಳ್ಳುವಲ್ಲಿ ಯಶಸ್ವಿಯಾದರು

2017ರಲ್ಲಿ ಮೊದಲ ಬಾರಿ ಸೆಯ್ಯದ್‌ ಮೋದಿ ಬ್ಯಾಡ್ಮಿಂಟನ್‌ ಪ್ರಶಸ್ತಿ ಗೆದ್ದಿದ್ದ ಸಿಂಧು, 5 ವರ್ಷಗಳ ಬಳಿಕ 2ನೇ ಪ್ರಶಸ್ತಿ ತಮ್ಮದಾಗಿಸಿಕೊಂಡರು. 2019ರ ವಿಶ್ವ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಬಳಿಕ ಸಿಂಧುಗೆ ಒಲಿದ ಮೊದಲ ಪ್ರಶಸ್ತಿ ಇದಾಗಿದೆ.

Exit mobile version