- ಮಕ್ಕಳ ಡಿಜಿಟಲ್ ವ್ಯಸನಕ್ಕೆ ಬ್ರೇಕ್: 16 ವರ್ಷಕ್ಕಿಂತ ಕಡಿಮೆ (Social media ban for children ) ವಯಸ್ಸಿನವರಿಗೆ ಸೋಶಿಯಲ್ ಮೀಡಿಯಾ ನಿಷೇಧ
- ಆರೋಗ್ಯ, ಓದು ಮತ್ತು ಮಾನಸಿಕ ಬೆಳವಣಿಗೆ ಕಾಪಾಡಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ
- ಡಿಜಿಟಲ್ ಡಿಟಾಕ್ಸ್ ಮೂಲಕ ಮಕ್ಕಳ ಭವಿಷ್ಯ ಸುರಕ್ಷಿತಗೊಳಿಸಲು ಸರ್ಕಾರದ ಯೋಜನೆ
Bengaluru: ಕರ್ನಾಟಕ ಸರ್ಕಾರವು ಮಕ್ಕಳ ಆರೋಗ್ಯ ಹಾಗೂ ಭವಿಷ್ಯವನ್ನು (Social media ban for children) ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
2026-27ರ ರಾಜ್ಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಯೋಜನೆ ಘೋಷಿಸಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ಫೋನ್ (Mobile Phone) ಮತ್ತು ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಮಾನಸಿಕ ಒತ್ತಡ, ನಿದ್ರಾಹೀನತೆ, ಏಕಾಗ್ರತೆಯ
ಕೊರತೆ ಮತ್ತು ಸಾಮಾಜಿಕ ಸಂಪರ್ಕ ಕಡಿಮೆಯಾಗುವಂತಹ ಸಮಸ್ಯೆಗಳು (Social media ban for children) ಹೆಚ್ಚುತ್ತಿರುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆ ಮಕ್ಕಳನ್ನು ಡಿಜಿಟಲ್ ವ್ಯಸನದಿಂದ ದೂರ ಇಡಲು ಮತ್ತು ಅವರ ದೈಹಿಕ-ಮಾನಸಿಕ ಆರೋಗ್ಯವನ್ನು ಕಾಪಾಡಲು ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ.
ಇತ್ತೀಚಿನ ಹಲವು ಅಧ್ಯಯನಗಳು ಮತ್ತು ವರದಿಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ದೊಡ್ಡ ಸಮಸ್ಯೆಯಾಗಿ ಬೆಳೆಯುತ್ತಿರುವುದು ಕಂಡುಬಂದಿದೆ.
ಮಕ್ಕಳ ಸಮಯದ ಬಹುಪಾಲು ಸ್ಮಾರ್ಟ್‌ಫೋನ್‌ಗಳಲ್ಲಿ ಕಳೆಯುತ್ತಿರುವುದು, ಅವರ ಓದು ಮತ್ತು ವೈಯಕ್ತಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಶಿಕ್ಷಣ ತಜ್ಞರು ಹೇಳುತ್ತಿದ್ದಾರೆ.
ಇದರಿಂದಾಗಿ ಮಕ್ಕಳಲ್ಲಿ ಒತ್ತಡ, ಆತಂಕ, ಆನ್‌ಲೈನ್ ಬುಲಿಂಗ್ ಮತ್ತು ಸಾಮಾಜಿಕ ದೂರದಂತಹ ಸಮಸ್ಯೆಗಳು ಹೆಚ್ಚುತ್ತಿವೆ.
ಈ ಎಲ್ಲಾ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಕ್ಕಳಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪರಿಸರ ಒದಗಿಸುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ವೇದಿಕೆಗಳಲ್ಲಿ ಚರ್ಚೆಗಳು ನಡೆದಿದ್ದವು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyanka Kharge) ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಮಕ್ಕಳಿಗೆ ಉಂಟಾಗುತ್ತಿರುವ ಹಾನಿ ಗಂಭೀರವಾಗಿದೆ ಎಂದು ಹೇಳಿದ್ದರು.
ಕೆಲವು ದೇಶಗಳು ಈಗಾಗಲೇ ಈ ಸಮಸ್ಯೆಗೆ ಕ್ರಮ ಕೈಗೊಂಡಿವೆ. ಫಿನ್‌ಲ್ಯಾಂಡ್‌ನಲ್ಲಿ ಮಕ್ಕಳಿಗೆ ಡಿಜಿಟಲ್ ಬಳಕೆಯನ್ನು ನಿಯಂತ್ರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಬ್ರಿಟನ್ ಈ ಬಗ್ಗೆ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಕೆಲವು ತಿಂಗಳ ಹಿಂದೆ ಮಕ್ಕಳಿಗಾಗಿ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಿದೆ. ಇದೇ ಮಾದರಿಯನ್ನು ಅಧ್ಯಯನ ಮಾಡಿ ಕರ್ನಾಟಕದಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಇದರ ಜೊತೆಗೆ ಮಕ್ಕಳಲ್ಲಿ ಡಿಜಿಟಲ್ ಜಾಗೃತಿ ಮೂಡಿಸಲು ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ (Digital detoxification) ಮತ್ತು ‘ಬಿಯಾಂಡ್ ಸ್ಕ್ರೀನ್ಸ್’ (Beyond Screens) ಎಂಬ ಕಾರ್ಯಕ್ರಮಗಳನ್ನು ಕೂಡ ಸರ್ಕಾರ ಆರಂಭಿಸಿದೆ.
ಈ ಕಾರ್ಯಕ್ರಮಗಳ ಮೂಲಕ ಮಕ್ಕಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ಸಮಾಜದ ಸಹಕಾರದಿಂದ ಮಕ್ಕಳಿಗೆ ಆರೋಗ್ಯಕರ ಜೀವನಶೈಲಿ ರೂಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
2025-26ರ ಆರ್ಥಿಕ ಸಮೀಕ್ಷೆಯಲ್ಲಿಯೇ ವಯಸ್ಸಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣ ಬಳಕೆಗೆ ನಿಯಂತ್ರಣ ತರಬೇಕೆಂಬ ಶಿಫಾರಸು ಮಾಡಲಾಗಿತ್ತು.
ಇದೀಗ 2026-27ರ ಕರ್ನಾಟಕ ಬಜೆಟ್‌ನಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿರುವುದು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡ ಪ್ರಮುಖ ಕ್ರಮವೆಂದು ಹೇಳಲಾಗುತ್ತಿದೆ. ಡಿಜಿಟಲ್ ಜಗತ್ತಿನಲ್ಲಿ ಬೆಳೆಯುತ್ತಿರುವ ಮಕ್ಕಳಿಗೆ ಸಮತೋಲನಯುತ ಜೀವನಶೈಲಿ ಅಗತ್ಯವಾಗಿದೆ.
ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಯಂತ್ರಿಸುವ ಮೂಲಕ ಮಕ್ಕಳಲ್ಲಿ ಓದು, ಕ್ರೀಡೆ, ಸೃಜನಶೀಲತೆ ಮತ್ತು ಸಾಮಾಜಿಕ ಸಂಪರ್ಕವನ್ನು ಹೆಚ್ಚಿಸಲು ಸಹಾಯವಾಗಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರದಿಂದ ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ಭವಿಷ್ಯ ನಿರ್ಮಾಣವಾಗಲಿದೆ ಎಂಬ ನಿರೀಕ್ಷೆ ಸರ್ಕಾರ ವ್ಯಕ್ತಪಡಿಸಿದೆ.
ಇದನ್ನು ಓದಿ : https://vijayatimes.com/digital-system-in-rto-offices/