Visit Channel

ಭಾರತೀಯ ಸ್ವಾತಂತ್ರ್ಯ ಹೋರಾಟಗಾರರನ್ನು ತಾಲಿಬಾನ್ ಗೆ ಹೋಲಿಸಿದ ಸಮಾಜವಾದಿ ಪಕ್ಷದ ಸಂಸದ

shafiqur-rahman-barq

ಲಕ್ನೋ ಆ 18 : ಭಾರತೀಯ ಸ್ವಾತಂತ್ರ್ಯ ಹೋರಾಟಗಾರರನ್ನು ತಾಲಿಬಾನಿಗಳಿಗೆ ಹೋಲಿಸಿದ ಸಮಾಜವಾದಿ ಪಕ್ಷದ ಸಂಸದ ಮತ್ತು ಇತರ ಇಬ್ಬರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲಿಬಾನ್ ಬಗ್ಗೆ ಪ್ರಚೋದನಕಾರಿ ಹೇಳಿಕೆ ಸಂಸದ ನೀಡಿದ ಶಫಿಕರ್ ರೆಹಮಾನ್ ಬಾರ್ಕ್ ಮತ್ತು ಇತರ ಇಬ್ಬರ ವಿರುದ್ದ ನಿನ್ನೆ ತಡರಾತ್ರಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿರುವ ಬಗ್ಗೆ ಮಾತನಾಡಿದ ಪೊಲೀಸ್ ಅಧೀಕ್ಷಕರಾದ ಚಾರ್ಖೇಶ್ ಮಿಶ್ರಾ  ನೀಡಿರುವ ಹೇಳಿಕೆಯಲ್ಲಿ ಭಾರತ ಸರ್ಕಾರದ ಪ್ರಕಾರ ತಾಲಿಬಾನ್ ಭಯೋತ್ಪಾದಕ ಸಂಘಟನೆಯಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಕೆ ಮಾಡಿರುವ ಕಾರಣದಿಂದಾಗಿ ಇದನ್ನು ನಾವು ದೇಶದ್ರೋಹವೆಂದು ಪರಿಗಣಿಸಬಹುದು. ಜೊತೆಗೆ ಈ ಆರೋಪಿಗಳು ತಾಲಿಬಾನ್ ಅನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದಾರೆ ಮತ್ತು ತಾಲಿಬಾನ್‌ ಪರವಾಗಿ ವಿಜಯವನ್ನು ಅವರು ಆಚರಿಸಿದ್ದಾರೆ ಎಂದು ಅವರು ತಿಳಿಸಿದರು.

ಸಂಸದ ಶಫಿಕರ್ ರೆಹಮಾನ್ ಬಾರ್ಕ್ ಅಫ್ಘಾನಿಸ್ತಾನ ಮುಕ್ತವಾಗಬೇಕೆಂದು ಬಯಸುತ್ತಾರೆ ಮತ್ತು ತಮ್ಮ ದೇಶವನ್ನು ನಡೆಸಲು ಬಯಸುತ್ತಾರೆ ತಾಲಿಬಾನ್ ಅನ್ನು ರಷ್ಯಾ ಅಥವಾ ಅಮೆರಿಕವನ್ನು ಅಫ್ಘಾನಿಸ್ತಾನದಲ್ಲಿ ತಮ್ಮನ್ನು ತಾವು ಸ್ಥಾಪಿಸಿಕೊಳ್ಳಲು ಅನುಮತಿಸದ ಶಕ್ತಿ ಎಂದು ತಾಲಿಬಾನ್ ಅನ್ನು ಹೊಗಳಿದ್ದರು. ಈ ಎಲ್ಲಾ ಕಾರಣದಿಂದಾಗಿ ಪೊಲೀಸರು ಅವರ ಮೇಲೆ ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.