Tumakuru: ಈ ಹಿಂದೆ ಪಾವಗಡದಲ್ಲಿ ನಿರ್ಮಿಸಿರುವ ಸೋಲಾರ್ ಪಾರ್ಕ್ (Solar Park) 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, ಇದರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಹಾಗಾಗಿ ಅದೇ ಮಾದರಿಯಲ್ಲಿ ಮಾದರಿಯಲ್ಲಿ ಮಧುಗಿರಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ (K J George) ಹೇಳಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_900,h_506/https://vijayatimes.com/wp-content/uploads/2024/07/deccanherald_2024-03_ccbe454c-957e-451c-870d-6623b5bc6702_file7u0ckt0m6li1lmej3eir.webp)
ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಗೆ ನೀಡುವ ಸಬ್ಸಿಡಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ರೈತರ ಪಂಪ್ ಸೆಟ್ ಗಳ ಅಕ್ರಮ-ಸಕ್ರಮಕ್ಕೂ ಒತ್ತು ನೀಡುತ್ತಿದ್ದೇವೆ. ಆದರೂ ವಿದ್ಯುತ್ ಸಮಸ್ಯೆ ಬಗೆಹರಿಯುತ್ತಿಲ್ಲ. ಅಕ್ರಮ ಪಂಪ್ ಸೆಟ್ ಗಳಿಂದಾಗಿ ಟ್ರಾನ್ಸ್ ಫಾರ್ಮರ್ (Transformer)ಗಳು ಸುಟ್ಟುಹೋಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುವುದರ ಜತೆಗೆ ಇಲಾಖೆಗೂ ನಷ್ಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸೋಲಾರ್ ಪಂಪ್ ಸೆಟ್ ಮತ್ತು ಜನರೇ ಸೋಲಾರ್ ವಿದ್ಯುತ್ ಉತ್ಪಾದಿಸುವ ಕುಸುಮ್ ಬಿ ಮತ್ತು ಕುಸುಮ್ ಸಿ (Kusum B And Kusum C) ಯೋಜನೆಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_1024,h_614/https://vijayatimes.com/wp-content/uploads/2024/07/solar_power_energy_6b25c88f02-1024x614.jpg)
ಕುಸುಮ್ ಸಿ ಯೋಜನೆಯಡಿ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4-ರಿಂದ 5 ಎಕರೆ ಭೂಮಿ ಬೇಕು. ಇದಕ್ಕೆ ಸರ್ಕಾರಿ ಭೂಮಿಯಾದರೆ ಉಚಿತವಾಗಿ ನೀಡಲಾಗುತ್ತದೆ. ಅದನ್ನು ಗುತ್ತಿಗೆದಾರರಿಗೆ 25 ವರ್ಷ ಅವಧಿಗೆ ಗುತ್ತಿಗೆ ನೀಲಾಗುತ್ತದೆ. ಗುತ್ತಿಗೆ ಅವಧಿಯಲ್ಲಿ ಅವರು ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ. ಪಾವತಿಸಬೇಕು. ಈ ಮೊತ್ತವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿ ಅದರಿಂದ ಸ್ಥಳೀಯ ಅಂಗನವಾಡಿಗಳು, ಶಾಲೆಗಳು, ಪಂಚಾಯ್ತಿಗಳ ಅಭಿವೃದ್ಧಿಗೆ ವಿನಿಯೋಗ ಮಾಡಲಾಗುವುದು.
ಕೇಂದ್ರ ಸರ್ಕಾರಿ ಸ್ವಾಮ್ಯದ ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (THDCIL) ಜತೆ ಜಂಟಿ ಸಹಭಾಗಿತ್ವದಲ್ಲಿ ಪಾವಗಡದಂತೆ ಸೋಲಾರ್ ಪಾರ್ಕ್ ನಿರ್ಮಿಸಲಾಗುವುದು. ಒಂದು ಮೆ. ವ್ಯಾ ಸೌರ ವಿದ್ಯುತ್ ಉತ್ಪಾದನೆಗೆ 4-5 ಎಕರೆ ಜಮೀನು ಬೇಕಾಗುತ್ತದೆ. ಅದೇ ರೀತಿ 500 ಮೆ.ವ್ಯಾ ಉತ್ಪದಾನೆಗೆ 2 ರಿಂದ 2.5 ಸಾವಿರ ಎಕರೆ ಜಾಗದ ಅವಶ್ಯಕತೆ ಇದೆ. ಭೂಮಿಯ ಲಭ್ಯತೆ ಆಧರಿಸಿ ಈ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜಾರ್ಜ್ ಹೇಳಿದ್ದಾರೆ.