3 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರು

 ಶ್ರೀನಗರ ಜ 7 : ಉಗ್ರರ ಕಾರ್ಯಚರಣೆಯಲ್ಲಿ ಭಾರತೀಯ ಸೈನಿಕರು 3 ಉಗ್ರರನ್ನು ಹೊಡೆದುರುಳಿಸಿದ್ದಾರೆ.  ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್-ಇ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ  ಟ್ವೀಟ್ ಮಾಡಿ, “ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅವರ  ಗುರುತು ಮತ್ತು ಸಂಬಂಧವನ್ನು ಖಚಿತಪಡಿಸಲಾಗುತ್ತಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು. ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳು ಪ್ರವೇಶಿಸುತ್ತಿದ್ದಂತೆ  ಎನ್‌ಕೌಂಟರ್‌ ಆರಂಭಗೊಂಡಿತು ಎಂದು ತಿಳಿದುಬಂದಿದೆ.

Exit mobile version