Jaipur: ಲೋಕಸಭಾ ಚುನಾವಣೆಯ ಹಿನ್ನೆಲೆ ಎಲ್ಲ ಪಕ್ಷಗಳ ಅಭ್ಯರ್ಥಿಗಳ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ ಸಂವಿಧಾನ ಬದಲಿಸುವ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ ಸೆ.ವಿಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲು ವಿವಿಧ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಚುನಾವಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು (Loksabha Election) ಅಸಮಾನತೆಯನ್ನೆ ಪ್ರೋತ್ಸಾಹಿಸುತ್ತಾ ಬಂದ ಸರ್ಕಾರ ಈಗ ಅಧಿಕಾರದಲ್ಲಿದೆ. ಹಾಗಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ ಮತ್ತು ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ . ಸರ್ವಾಧಿಕಾರದ ಆಡಳಿತ ದೇಶದಲ್ಲಿದ್ದು, ಮತದಾರರು ಮತದಾನದ ಮೂಲಕ ಸೂಕ್ತ ಉತ್ತರ ನೀಡಲಿದ್ದಾರೆ.
ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿ ಕೊಂಡಿರುವವರ ಸಾಲಿಗೆ ಪ್ರಧಾನಿ ಮೋದಿ (Modi) ಸಹ ಸೇರುತ್ತಾರೆ. ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ . ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಿಸುತ್ತಿದ್ದಾರೆ.ಈಗಾಗಲೇ ಕಾಂಗ್ರೆಸ್ (Congress) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Wadra), ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejrival) ಮತ್ತು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ತನಿಖಾ ಸಂಸ್ಥೆಗಳನ್ನು ಬಂಧಿಸಿರುವುದು ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು ಕಿಡಿಕಾರಿದ್ದಾರೆ.