ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ವಿದೇಶ ಪ್ರವಾಸ ; ರಾಹುಲ್, ಪ್ರಿಯಾಂಕಾ ಸಾಥ್

Sonia Gandhi

ನವದೆಹಲಿ : ಕಾಂಗ್ರೆಸ್‌ ಅಧ್ಯಕ್ಷೆ(Congress President) ಸೋನಿಯಾ ಗಾಂಧಿ(Sonia Gandhi) ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರೊಂದಿಗೆ ಮಕ್ಕಳಾದ ರಾಹುಲ್‌ ಗಾಂಧಿ(Rahul Gandhi) ಮತ್ತು ಪ್ರಿಯಾಂಕಾ ವಾದ್ರಾ(Priyanka Vadra) ಕೂಡಾ ವಿದೇಶಕ್ಕೆ ತೆರಳಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಅಧಿಕೃತ ಮಾಹಿತಿ ನೀಡಿದೆ.


ಇನ್ನು ಇಡೀ ಗಾಂಧಿ ಪರಿವಾರ ವೈದ್ಯಕೀಯ ತಪಾಸಣೆಗಾಗಿ ಯಾವ ದೇಶಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಯಾವ ದಿನಾಂಕದಂದು ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಭೇಟಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಭದ್ರತಾ ದೃಷ್ಟಿಯಿಂದ ಗೌಪ್ಯವಾಗಿಡಲಾಗಿದೆ.

https://fb.watch/f4wx33Ek9Q


ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಇಟಲಿಯಲ್ಲಿ ಭೇಟಿ ಮಾಡುತ್ತಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಯಾಣಿಸಲಿದ್ದಾರೆ.

ಈ ಮಧ್ಯೆ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 4, 2022 ರಂದು ನವದೆಹಲಿಯಲ್ಲಿ ಕಾಂಗ್ರೆಸ್ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಇನ್ನು ಈ ತಿಂಗಳ ಆರಂಭದಲ್ಲಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ : https://vijayatimes.com/chethan-ahimsa-statement-sparks/

ಈ ಹಿನ್ನಲೆಯಲ್ಲಿ ಅವರು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಸೆಪ್ಟೆಂಬರ್ 7 ರಿಂದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮುಂಬರುವ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್‌ ಪಕ್ಷವು ಸಜ್ಜಾಗುತ್ತಿರುವ ಸಮಯದಲ್ಲಿ ಈ ಪ್ರವಾಸ ಬಂದಿದೆ.

Exit mobile version