Visit Channel

ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಆರೋಪ

Madhavan

ದೆಹಲಿಯಲ್ಲಿ ಮಹಿಳೆಯೊಬ್ಬರ ದೂರಿನ ಮೇರೆಗೆ ಕಾಂಗ್ರೆಸ್ ಮುಖ್ಯಸ್ಥೆ(Congress President), ಹಿರಿಯ ನಾಯಕಿ ಸೋನಿಯಾ ಗಾಂಧಿ(Sonia Gandhi) ಅವರ ಆಪ್ತ ಸಹಾಯಕ(Assistant) ಪಿಪಿ ಮಾಧವನ್(PP Madhavan) ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ(Rape) ಆರೋಪವನ್ನು ಆಲಿಸಿದ್ದಾರೆ. ಅತ್ಯಾಚಾರದ ಜೊತೆಗೆ, ಮಾಧವನ್ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಆರೋಪವನ್ನೂ ಹೊರಿಸಿದ್ದಾರೆ ಎನ್ನಲಾಗಿದೆ.

congress

ಮಹಿಳೆ, ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಪಿಪಿ ಮಾಧವನ್ (71) ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ(Sexual Assault) ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಹೇಳಿಕೆಯ ಪ್ರಕಾರ, ಪಿಪಿ ಮಾಧವನ್ ಮಹಿಳೆಗೆ ತನ್ನ ಪ್ರೀತಿಯನ್ನು ಹೇಳಿಕೊಂಡಿದ್ದಾನೆ ಮತ್ತು ಅವಳನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ನನ್ನ ಒಪ್ಪಿಗೆ ಇಲ್ಲದೇ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಯ ಪತಿ, ಕಾಂಗ್ರೆಸ್ ಕಚೇರಿಯಲ್ಲಿ ಹೋರ್ಡಿಂಗ್‌ಗಳನ್ನು ಹಾಕುವುದು ಮತ್ತು ಇತರ ಕೆಲಸಗಳನ್ನು ಮಾಡುತ್ತಿದ್ದು, 2020 ರಲ್ಲಿ ನಿಧನರಾದರು ಎಂದು ತಿಳಿಸಲಾಗಿದೆ. ಫೆಬ್ರವರಿ 2020 ರಲ್ಲಿ ನನ್ನ ಗಂಡನ ಮರಣದ ನಂತರ, ನಾನು ಕೆಲಸ ಹುಡುಕಲು ಪ್ರಾರಂಭಿಸಿದೆ ಮತ್ತು ಮಾಧವನ್ ಅವರೊಂದಿಗೆ ಸಂಪರ್ಕದಲ್ಲಿದ್ದೆ. ಅವರು ಮೊದಲು ನನ್ನನ್ನು ಸಂದರ್ಶನಕ್ಕೆ ಕರೆದರು ಬಳಿಕ ವೀಡಿಯೊ ಕರೆಗಳನ್ನು ಮತ್ತು ವಾಟ್ಸಾಪ್‌ನಲ್ಲಿ ನನ್ನೊಂದಿಗೆ ಚಾಟ್ ಮಾಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

Madhavan

ಮಾಧವನ್ ನನ್ನನ್ನು ಉತ್ತಮ್ ನಗರ ಮೆಟ್ರೋ ನಿಲ್ದಾಣದ ಬಳಿಯಿರುವ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದರು ಮತ್ತು ಅವರ ಕಾರಿನೊಳಗೆ ನನ್ನನ್ನು ಬಲವಂತಪಡಿಸಿದರು. ಇದಾದ ನಂತರ ಫೆಬ್ರವರಿ 2022 ರಲ್ಲಿ, ನನ್ನನ್ನು ಸುಂದರ್ ನಗರದ ಫ್ಲಾಟ್‌ಗೆ ಕರೆದೊಯ್ದು ನನ್ನ ಒಪ್ಪಿಗೆಯಿಲ್ಲದೆ ನನ್ನ ಮೇಲೆ ಬಲವಂತಪಡಿಸಿದರು ಎಂದು ತಮ್ಮ ಆರೋಪದಲ್ಲಿ ಪ್ರತ್ಯೇಕವಾಗಿ ಉಲ್ಲೇಖಿಸಿದ್ದಾರೆ.
ಇನ್ನು ತಮ್ಮ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಧವನ್, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳು ಕೇವಲ ಪಿತೂರಿ ಮತ್ತು ಆಧಾರರಹಿತ ಎಂದು ಹೇಳಿದ್ದಾರೆ.

“ಹಿರಿಯ ರಾಜಕೀಯ ನಾಯಕರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ 71 ವರ್ಷದ ವ್ಯಕ್ತಿಯ ಮೇಲೆ ಹಲವು ರೀತಿಯಲ್ಲಿ ಆರೋಪಗಳನ್ನು ಮಾಡಲಾಗಿದೆ” ಎಂದು ಪೊಲೀಸರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.