ಪಾಟ್ನಾ : ಬಿಹಾರದಲ್ಲಿ(Bihar) ಜೆಡಿಯು-ಆರ್ಜೆಡಿ-ಕಾಂಗ್ರೆಸ್(JDU-RJD-Congess) ಮೈತ್ರಿಕೂಟ ಸರ್ಕಾರ ರಚನೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ(Congress President) ಸೋನಿಯಾ ಗಾಂಧಿ(Sonia Gandhi) ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಬಿಹಾರ(Bihar) ಕಾಂಗ್ರೆಸ್ ಶಾಸಕರು ಮಾದ್ಯಮಗಳಿಗೆ ತಿಳಿಸಿದ್ದಾರೆ.

ನಿತೀಶ್ ಕುಮಾರ್(Nithish Kumar) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ(Resign) ನೀಡಿದ ಕೂಡಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ(Rahul Gandhi) ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿ, ಜೆಡಿಯು-ಆರ್ಜೆಡಿ-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆಯಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎನ್ನಲಾಗಿದೆ.
ಮಹಾಘಟಬಂಧನ್ ಮತ್ತು ಜೆಡಿಯು(JDU) ನಡುವಿನ ಮೈತ್ರಿಯನ್ನು ಬೆಸೆಯುವಲ್ಲಿ ಸೋನಿಯಾ ಗಾಂಧಿ ಅವರು ಮಧ್ಯವರ್ತಿ ಪಾತ್ರವನ್ನು ನಿರ್ವಹಿಸಿದ ರೀತಿ ನನಗೆ ತುಂಬಾ ಹೆಮ್ಮೆ ತಂದಿದೆ. ಸೋನಿಯಾ ಗಾಂಧಿ ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮಧ್ಯಪ್ರವೇಶಿಸಿ ಹೊಸ ಸರ್ಕಾರ ರಚನೆಗೆ ಸಹಾಯ ಮಾಡುವ ಮೂಲಕ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ(Congress MLA) ಪ್ರತಿಮಾ ದಾಸ್(Prathima Das) ಮಾದ್ಯಮಗಳಿಗೆ ತಿಳಿಸಿದ್ದಾರೆ.

ಬಿಹಾರದಲ್ಲಿ ಕಾಂಗ್ರೆಸ್ ಶಾಸಕರು ಸಚಿವ ಸ್ಥಾನ ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಕನಿಷ್ಠ ನಾಲ್ಕು ಸಚಿವ ಸ್ಥಾನ ಸಿಗಬೇಕು ಎಂದು ಬಿಹಾರ ಕಾಂಗ್ರೆಸ್ ಶಾಸಕರು ಆಗ್ರಹಿಸಿದ್ದಾರೆ. ಶಾಸಕರ ಸಂಖ್ಯೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಕನಿಷ್ಠ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಹಕ್ಕಿದೆ ಎಂದು ಕಾಂಗ್ರೆಸ್ ಮುಖಂಡ ಅಜೀತ್ ಶರ್ಮಾ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ನ ಖಗಾರಿಯಾ ಕ್ಷೇತ್ರದ ಶಾಸಕ ಛತ್ರಪತಿ ಯಾದವ್ ಅವರು ‘ಯಾದವ’ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ತಮ್ಮನ್ನು ಸಚಿವರನ್ನಾಗಿ ಮಾಡಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.
ಇನ್ನು ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು, ಆಗಸ್ಟ್ 24 ರಂದು ಬಿಹಾರ ಅಸೆಂಬ್ಲಿಯಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲಿದೆ. ಈ ಮಧ್ಯೆ ಆಗಸ್ಟ್ 16 ರಂದು ಬಿಹಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.