New Delhi : ಕಾಂಗ್ರೆಸ್ ಪಕ್ಷದ(Congress Party) ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಮುಖ್ಯಸ್ಥರ ಅಧಿಕೃತ ಅಭ್ಯರ್ಥಿ ಇರುವುದಿಲ್ಲ, ಹೀಗಾಗಿ ಅಧ್ಯಕ್ಷ ಸ್ಥಾನದ ಚುನಾವಣೆ(Election) ತಟಸ್ಥವಾಗಿರಲಿ ಎಂದು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಕಾಂಗ್ರೆಸ್ ಸಂಸದ ಶಶಿ ತರೂರ್ಗೆ(Shashi Taroor) ಹೇಳಿದ್ದಾರೆ ಎನ್ನಲಾಗಿದೆ.
ನಿನ್ನೆ ಕಾಂಗ್ರೆಸ್ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ಶಶಿ ತರೂರ್ ಭೇಟಿಯಾಗಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಚರ್ಚೆ ನಡೆಸಿದ್ದು, “ಅಧ್ಯಕ್ಷ ಸ್ಥಾನಕ್ಕೆ ನಾನು ಯಾವುದೇ ಹೆಸರನ್ನು ಸೂಚಿಸುವುದಿಲ್ಲ. ಚುನಾವಣೆ ತಟಸ್ಥವಾಗಿ ನಡೆಯಲಿ” ಎಂದು ಸೋನಿಯಾ ಗಾಂಧಿ ಹೇಳಿದ್ಧಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : https://vijayatimes.com/chemical-food/
ಇನ್ನು ತಿರುವನಂತಪುರಂ(Thiruvanathapuram) ಸಂಸದ ಶಶಿ ತರೂರ್ ಅವರ ಆಪ್ತ ಮೂಲಗಳ ಪ್ರಕಾರ, ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಪಡೆಯಲು ಶಶಿ ತರೂರ್ ಹೋಗಿಲ್ಲ. ಕಾಂಗ್ರೆಸ್ ಅಧ್ಯಕ್ಷರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಕಲ್ಪನೆಯನ್ನು ಶಶಿ ತರೂರ್ ಅರ್ಥಮಾಡಿಕೊಂಡಿದ್ದಾರೆ ಎಂದು ತಿಳಿಸಿವೆ.
ಇನ್ನು ಶಶಿ ತರೂರ್, ದೀಪೇಂದರ್ ಹೂಡಾ, ಜೈ ಪ್ರಕಾಶ್ ಅಗರ್ವಾಲ್ ಮತ್ತು ವಿಜೇಂದ್ರ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದರು. ಶಶಿ ತರೂರ್ ಭೇಟಿಯ ವಿವರಗಳನ್ನು ಬಹಿರಂಗಪಡಿಸದಿದ್ದರೂ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸೋನಿಯಾ ಗಾಂಧಿಯವರಿಂದ ಅವರು ಅನುಮತಿ ಕೋರಿದ್ದಾರೆ ಎನ್ನಲಾಗಿದ್ದು,
ಇದನ್ನೂ ಓದಿ : https://vijayatimes.com/state-bjp-reminds-siddaramaiah/
ಆದರೆ “ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಬೇಕಾದರೂ ಸ್ವತಂತ್ರರು” ಎಂದು ಸೋನಿಯಾ ಗಾಂಧಿ ಅವರು ಶಶಿ ತರೂರ್ ಅವರಿಗೆ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.
- ಮಹೇಶ್.ಪಿ.ಎಚ್