- ಮತ್ತೆ ಮುನ್ನೆಲೆಗೆ ಬಂದ ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald case)
- ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ (Sonia Gandhi and Rahul Gandhi) ಹೆಸರು ಚಾರ್ಜ್ಶೀಟ್ನಲ್ಲಿ ಪ್ರಸ್ತಾಪ
- ಏಪ್ರಿಲ್ 25ರಂದು ವಿಚಾರಣೆ (Sonia Rahul Gandhis names in chargesheet)
New delhi: ನ್ಯಾಷನಲ್ ಹೆರಾಲ್ಡ್ ಪ್ರಕರಣದ (National Herald case) ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯ (ED) ಇಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ (Sonia Gandhi) ಮತ್ತು ಕಾಂಗ್ರೆಸ್ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ. ಸುಮನ್ ದುಬೆ ಮತ್ತು ಇತರರ (Suman Dubey and others) ಹೆಸರುಗಳನ್ನು ಸಹ ಈ ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಪ್ರಕರಣದ ಆರೋಪಗಳನ್ನು ಪರಿಗಣಿಸಲು ನ್ಯಾಯಾಲಯ ಏಪ್ರಿಲ್ 25ರಂದು ವಿಚಾರಣೆಯನ್ನು ನಡೆಸಲಿದೆ.

ಏಪ್ರಿಲ್ 9 ರಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ (Vishal Gogne) ಅವರ ಮುಂದೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿತ್ತು .ಆರೋಪಿಗಳ ವಿರುದ್ಧದ ಆರೋಪವನ್ನು ಪರಿಗಣಿಸಲು ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 25 ಕ್ಕೆ ನಿಗದಿ ಪಡಿಸಿದ್ದಾರೆ.
ಆರೋಪಪಟ್ಟಿಯಲ್ಲಿ ರಾಹುಲ್, ಸೋನಿಯಾ ಗಾಂಧಿ (Rahul, Sonia Gandhi) ಅವರ ಜೊತೆಗೆ ಪಕ್ಷದ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ (Pitroda and Suman) ದುಬೆ ಅವರೂ ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಇದೇ ಮೊದಲ ಬಾರಿಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಕಾಂಗ್ರೆಸ್ ನಿಯಂತ್ರಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ (National Herald newspaper) ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ ಸಂಬಂಧಿಸಿದ 661 ಕೋಟಿ ಮೌಲ್ಯ (Valued at Rs 661 crore) ಆಸ್ತಿಗಳನ್ನು ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಜಪ್ತಿ ಮಾಡಿತ್ತು. ಈ ಸಂಬಂಧ ನೋಟಿಸ್ ಕೂಡ ಜಾರಿ ಮಾಡಿತ್ತು.
ಇದನ್ನೂ ಓದಿ: http://ಕರ್ನಾಟಕದಲ್ಲಿ ‘ವಕ್ಫ್ ಕಾಯ್ದೆ’ ಜಾರಿ ಮಾಡಲ್ಲ – ಸಚಿವ ಜಮೀರ್ ಹೇಳಿಕೆ
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (BJP leader Subramanian Swamy ) ಅವರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಇದರ ಆಧಾರದ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ದಾಖಲಾಗಿದೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೂಲಕ 2000 ಕೋಟಿ ರೂಪಾಯಿ ಮೌಲ್ಯದ ಎಜೆಎಲ್ ಆಸ್ತಿಗಳನ್ನು (AJL assets) ಕೇವಲ 50 ಲಕ್ಷ ರೂ.ಗಳಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ (Sonia Rahul Gandhis names in chargesheet) ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ.