- ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ
- 2015ರಲ್ಲಿ ಪ್ರೀತಿಸಿ ತಾಜುದ್ದೀನ್ ಎಂಬುವವರ ಜೊತೆಗೆ ಸೋಫಿಯಾ ಮದುವೆ (Sophia Qureshi Operation Sindhur)
- ಸೋಫಿಯಾ ಖುರೇಷಿ ಪತಿ ತಾಜುದ್ದೀನಿ ಕೂಡ ಕರ್ನಲ್ ಆಗಿ ಸೇವೆ ಸಲ್ಲಿಕೆ
New delhi: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ (Genocide of Hindus) ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಇಂದು ಸೂರ್ಯೋದಯಕ್ಕೂ ಮುನ್ನವೇ ಪಾಕ್‌ನ ಉಗ್ರ (Pakistani terrorist) ತಾಣಗಳನ್ನು ಭಾರತೀಯ ವಾಯುಪಡೆ ಧ್ವಂಸ ಮಾಡಿದೆ. ಘಟನೆ ಬಳಿಕ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳಾದ (women officers) ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ (Vyomika Singh) ಮತ್ತು ಕರ್ನಲ್ ಸೋಫಿಯಾ ಖುರೇಷಿ (Sophia Qureshi) ಅವರು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸುಳ್ಳಿನ ಮುಖವಾಡವನ್ನು ಕಳಚಿದ್ದಾರೆ.
ಇನ್ನೂ ಆಪರೇಷನ್ ಸಿಂಧೂರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಪ್ರಸ್ತುತ ಭಾರತೀಯ ಸೇನೆಯ ಸಿಗ್ನಲ್ಸ್ ದಳದ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ (Military exercise) ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ (Female officer) ಇತಿಹಾಸ ನಿರ್ಮಿಸಿದ್ದರು.
ಆ ಸಮಯದಲ್ಲಿ ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತಿನಲ್ಲಿ ಅವರು ಭಾರತದ ತಂಡವನ್ನು ಮುನ್ನಡೆಸಿದ್ದರಲ್ಲದೇ ಪಾಲ್ಗೊಂಡಿದ್ದ 18 ರಾಷ್ಟ್ರಗಳ ಪೈಕಿ ಏಕೈಕ (one among 18 countries) ಮಹಿಳಾ ಕಮಾಂಡರ್ ಆಗಿದ್ದರು.ಮೂಲತಃ ಗುಜರಾತಿನ ವಡೋದರಾದವರಾಗಿರುವ ಸೋಫಿಯಾ ಖುರೇಷಿ ಸೇನಾ (Sophia Qureshi Sena) ಹಿನ್ನೆಲೆಯುಳ್ಳ ಕುಟುಂಬದವರು. ಖುರೇಷಿ ತಾತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇವರ ತಂದೆ ಸಹ ಸೈನ್ಯದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸೋಫಿಯಾ ಖುರೇಷಿ, 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (Officers Training Academy, Chennai) ಮೂಲಕ ನಿಯೋಜಿತಗೊಂಡು, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕೋರ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2006ರಲ್ಲಿ ಕಾಂಗೋದಲ್ಲಿ ನಡೆದ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಎಕ್ಸಸೈರ್ಸ್ ಫೋರ್ಸ್ (Excise Force) 18 ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ (First female officer) ಎಂಬ ಹೆಗ್ಗಳಿಕೆ ಪಾತ್ರರಾದವರು. ಖುರೇಷಿ ಪಂಜಾಬ್ ಗಡಿಯಲ್ಲಿ ನಡೆದ ‘ಆಪರೇಷನ್ ಪರಾಕ್ರಮ್’ನಲ್ಲಿ (‘Operation Parakram’) ಭಾಗವಹಿಸಿದ್ದರು. 2010ರಿಂದ ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ.
ಕರ್ನಲ್ ಸೋಫೀಯಾ ಅವರ ಪತಿ, ಕರ್ನಲ್ ತಾಜುದ್ದೀನ್ ಖುರೇಷಿ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು. ಇವರೂ ಸಹ ಭಾರತೀಯ ಸೇನೆಯ ಮೆಕ್ಯಾನೈಸ್ಡ್ ಇನ್‌ಫೆಂಟ್ರಿಯಲ್ಲಿ ಕರ್ನಲ್ (Colonel in the Mechanized Infantry) ಆಗಿ ಸದ್ಯ ಜಾನ್ಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 2015ರಲ್ಲಿ ಪ್ರೇಮ ವಿವಾಹವಾದ ಈ ದಂಪತಿಗಳು, ಭಾರತೀಯ ಸೇನೆಯಲ್ಲಿ ಒಟ್ಟಿಗೆ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿಯಾಗಿದೆ.
ಇದನ್ನು ಓದಿ : http://ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು: ಅಧಿಕಾರಿಗಳಿಗೆ ಸಿಎಂ ಸೂಚನೆ
ಕರ್ನಲ್ ಸೋಫೀಯಾ ಖುರೇಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು (Army unit) ಮುನ್ನಡೆಸಿದ ಮೊದಲ ಭಾರತೀಯ (Sophia Qureshi Operation Sindhur) ಮಹಿಳಾ ಅಧಿಕಾರಿಯಾಗಿ ಈಗಾಗಲೇ ಇತಿಹಾಸ ಸೃಷ್ಟಿಸಿದ್ದಾರೆ. ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯ ಯಶಸ್ಸಿನ ಮೂಲಕ ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ ಅವರು ರಾಷ್ಟ್ರದಾದ್ಯಂತ ಹೆಮ್ಮೆಯ ಸಂಕೇತವಾಗಿದ್ದಾರೆ.