ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ವೈರಸ್‌ ಪತ್ತೆ

ಬೆಂಗಳೂರು, ಮಾ. 11: ರಾಜ್ಯದಲ್ಲಿ ಒಂದೆಡೆ ಕೊರೊನಾ ಆತಂಕ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ಕೊರೊನಾ ವೈರಸ್‌ನ ಮೊದಲ ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ದಾಖಲಾಗಿದೆ. ಆರೋಗ್ಯ ಇಲಾಖೆ ತನ್ನ ಒಂದು ಬುಲೆಟಿನ್ ನಲ್ಲಿ ಇದನ್ನು ಖಚಿತಪಡಿಸಿದೆ.

ಮಾರ್ಚ್ 10ರ ವೇಳೆಗೆ ಭಾರತದಲ್ಲಿ ಯುಕೆಯಿಂದ ಹಿಂದಿರುಗುವ 64 ಮಂದಿ ಕರೋನಾ ವೈರಸ್ ಪಾಸಿಟಿವ್ ಎಂದು ಪತ್ತೆ ಹಚ್ಚಲಾಗಿತ್ತು. ಅಷ್ಟೇ ಅಲ್ಲ, ಈ 64 ಜನರ 26 ಪ್ರಾಥಮಿಕ ಸಂಪರ್ಕಗಳು ಕರೋನಾ ಪಾಸಿಟಿವ್ ಎಂದು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಡೆಸಿದ ಪರೀಕ್ಷೆಗಳ ಪ್ರಕಾರ, ವ್ಯಕ್ತಿಯೊಬ್ಬ ದಕ್ಷಿಣ ಆಫ್ರಿಕಾ ಮಾದರಿಯ ಕರೋನಾ ಸೋಂಕಿಗೆ ಒಳಗಿದ್ದಾನೆ ಎಂದು ತಿಳಿದು ಬಂದಿದೆ.

ಕೋವಿಡ್ ಸೋಂಕಿತರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಸ್ ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

Exit mobile version