• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೌಜನ್ಯ ಪ್ರಕರಣ: ‘ಸಿಬಿಐ ತನಿಖೆ ಸಮರ್ಪಕವಿಲ್ಲ’ ಎಂದ ಸುಪ್ರೀಂ ಕೋರ್ಟ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸೌಜನ್ಯ ಪ್ರಕರಣ: ‘ಸಿಬಿಐ ತನಿಖೆ ಸಮರ್ಪಕವಿಲ್ಲ’ ಎಂದ ಸುಪ್ರೀಂ ಕೋರ್ಟ್
0
SHARES
16
VIEWS
Share on FacebookShare on Twitter

ಸೌಜನ್ಯ ಕೊಲೆ ಪ್ರಕರಣಕ್ಕೆ ಹೊಸ (Sowjanya case to CBI investigation) ತಿರುವು; ಸಿಬಿಐ ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ

ತನಿಖಾಧಿಕಾರಿಯ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ; ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಗೆ ಒಲವು

12 ವರ್ಷಗಳ ಬಳಿಕ ಸೌಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

New delhi : 2012ರಲ್ಲಿ ಧರ್ಮಸ್ಥಳ ಸಮೀಪ ನಡೆದ ವಿದ್ಯಾರ್ಥಿನಿ (Sowjanya case to CBI investigation) ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ರಾಷ್ಟ್ರದ ಗಮನ ಸೆಳೆದಿದೆ.

ಈ ಪ್ರಕರಣದ ತನಿಖೆ ನಡೆಸಿದ ಕೇಂದ್ರ ತನಿಖಾ ದಳ (ಸಿಬಿಐ) ಕಾರ್ಯವೈಖರಿಯ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಗತ್ಯವಿದ್ದರೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮರುತನಿಖೆ ನಡೆಸಬಹುದು ಎಂಬ ಮಹತ್ವದ ಸೂಚನೆಯನ್ನು ನೀಡಿದೆ.

Sowjanya case to  CBI investigation

ಆರೋಪಿ ಈಗಾಗಲೇ ಖುಲಾಸೆಯಾಗಿರುವ ಹಿನ್ನೆಲೆ ಪ್ರಕರಣದಲ್ಲಿ ಹೊಸದಾಗಿ ತನಿಖೆ ನಡೆಸಬೇಕೆಂಬ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್, ಆರಂಭದಲ್ಲಿ (Sowjanya case to CBI investigation) ರಾಜ್ಯ ಪೊಲೀಸರು ತನಿಖೆ ನಡೆಸಿದ ನಂತರ ಪ್ರಕರಣವನ್ನು ಸಿಐಡಿ ಹಾಗೂ ಬಳಿಕ 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಆದರೆ ಸಿಬಿಐ ನಡೆಸಿದ ತನಿಖೆಯ ಗುಣಮಟ್ಟದ ಬಗ್ಗೆ ನ್ಯಾಯಪೀಠ ತೀವ್ರ ಪ್ರಶ್ನೆಗಳನ್ನು ಎತ್ತಿತು. ತನಿಖಾಧಿಕಾರಿಯು ಸ್ವತಂತ್ರವಾಗಿ ತನಿಖೆ ನಡೆಸುವ ಬದಲು ಹಿಂದಿನ ದಾಖಲೆಗಳನ್ನೇ ಆಧರಿಸಿ ವರದಿ ಸಲ್ಲಿಸಿದ್ದಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.

ತನಿಖಾಧಿಕಾರಿ ಅಪರಾಧ ನಡೆದ ಸ್ಥಳಕ್ಕೂ ಭೇಟಿ ನೀಡಿಲ್ಲ ಎಂಬ ವಿಚಾರವೂ ನ್ಯಾಯಪೀಠದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರ ಲೋಪವೆಂದು ಪರಿಗಣಿಸಲಾಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಪ್ರಕರಣದ ಹಲವು ಪ್ರಮುಖ ಸಾಕ್ಷ್ಯಗಳನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂದು ವಾದಿಸಿದರು.

ವಿಶೇಷವಾಗಿ ಸಂತ್ರಸ್ತೆಯ ತಾಯಿಯ ಹೇಳಿಕೆಯನ್ನು ರಾಜ್ಯ ಪೊಲೀಸ್, ಸಿಐಡಿ ಹಾಗೂ ಸಿಬಿಐ – ಈ ಮೂರೂ ಸಂಸ್ಥೆಗಳು ತನಿಖೆಯ ವೇಳೆ ದಾಖಲಿಸದೇ ಇರುವುದು ಗಂಭೀರ ನಿರ್ಲಕ್ಷ್ಯ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಂತಹ ಪ್ರಮುಖ ಸಾಕ್ಷಿಯನ್ನು ದಾಖಲಿಸದೇ ತನಿಖೆ ಪೂರ್ಣಗೊಳಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಿದೆ

ಎಂದು ಅಭಿಪ್ರಾಯಪಟ್ಟಿತು. ಕ್ರೂರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಇಂತಹ ಲೋಪಗಳು ಕ್ಷಮಾರ್ಹವಲ್ಲ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದರು.

ಸಿಬಿಐ ಪರ ವಕೀಲರು, ಪ್ರಕರಣದ ತನಿಖೆಯನ್ನು 2013ರಲ್ಲಿ ವಹಿಸಿಕೊಂಡು 2015ರಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ವಾದಿಸಿದರು.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಷ್ಟು ವರ್ಷಗಳ ತನಿಖೆಯ ಬಳಿಕವೂ ಹೊಸ ಸಾಕ್ಷ್ಯಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬುದು ತನಿಖೆಯ ದೌರ್ಬಲ್ಯವನ್ನು

ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿತು. ಈ ಪ್ರಕರಣದಲ್ಲಿ ಸಿಬಿಐ ಪಾತ್ರ ಸಮರ್ಥನೀಯವಾಗಿ ಕಾಣುತ್ತಿಲ್ಲ ಎಂದು ಕೋರ್ಟ್ ಕಠಿಣವಾಗಿ ಹೇಳಿತು.

ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ತನಿಖೆ ನಡೆಸಲು ಸಿದ್ಧವಿದ್ದರೆ, ಅದನ್ನು ಅನುಮಾನಿಸುವ ಅಗತ್ಯವಿಲ್ಲ ಎಂದು ಹೇಳಿದ ನ್ಯಾಯಪೀಠ, ಎಸ್‌ಐಟಿ ರಚನೆಗೆ ಸಂಬಂಧಿಸಿದ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.

ಸುಪ್ರೀಂ ಕೋರ್ಟ್‌ನ ಈ ವಿಚಾರಣೆ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಕುಟುಂಬ ಹಾಗೂ ಸಾರ್ವಜನಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ರಾಜ್ಯ

ಸರ್ಕಾರಕ್ಕೆ ಎಸ್‌ಐಟಿ ರಚಿಸಿ ಮರುತನಿಖೆ ನಡೆಸಲು ಅವಕಾಶ ನೀಡುವ ಕುರಿತು ಅಂತಿಮ ಆದೇಶ ಹೊರಬಿದ್ದರೆ, ಪ್ರಕರಣದ ಹಲವು ಹೊಸ ಅಂಶಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

ಕಳೆದ ಹಲವು ವರ್ಷಗಳಿಂದ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ನಡುವೆ ಸುಪ್ರೀಂ ಕೋರ್ಟ್ ನೀಡಿರುವ ಈ ಅಭಿಪ್ರಾಯ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಅಂತಿಮ ತೀರ್ಪಿನ ಮೇಲೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ತನಿಖೆಯ ದಿಕ್ಕು ಅವಲಂಬಿತವಾಗಿದ್ದು, ರಾಜ್ಯದಾದ್ಯಂತ ಈ ಪ್ರಕರಣದ ಬೆಳವಣಿಗೆಗಳತ್ತ ಜನರು ತೀವ್ರ ಕುತೂಹಲದಿಂದ ಗಮನ ಹರಿಸಿದ್ದಾರೆ.

ಇದನ್ನು ಓದಿ : https://vijayatimes.com/cjp-warns-massive-protest-in-delhi/

Tags: CaseCBIDharmasthalainvestigationsupreme court

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.