ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತಂದರೆ ೧೦ ಕೆಜಿ ಉಚಿತ ಅಕ್ಕಿ ಕೊಡ್ತೇವೆ : ರಾಜ್ಯ ಕಾಂಗ್ರೆಸ್‌ ಭರವಸೆ!

Bengaluru : ಕರ್ನಾಟಕ ರಾಜ್ಯ ಕಾಂಗ್ರೆಸ್(Congress) ಪಕ್ಷ ಇದೀಗ ತಮ್ಮ ಭರವಸೆಯ ಬೆಳಕನ್ನು ಚೆಲ್ಲಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಬಿಪಿಎಲ್ ಕುಟುಂಬಗಳಿಗೆ 10 ಕೆ.ಜಿ ಉಚಿತ ಅಕ್ಕಿ ಕೊಡ್ತೇವೆ(special prominence from congress) ಎಂಬ ಭರವಸೆಯನ್ನು ನೀಡಿದೆ.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಹಲವು ಕಾರ್ಯಕ್ರಮಗಳು, ಭರವಸೆ ಮೂಲಕ ಭಾರಿ ಪೈಪೋಟಿಯನ್ನು ನಡೆಸುತ್ತಿದೆ.

ಸದ್ಯ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್‌ ಮತ್ತೊಂದು ಭರವಸೆಯನ್ನು ರಾಜ್ಯದ ಜನತೆಯ ಮುಂದಿಟ್ಟಿದೆ! ಇದು ಮೂರನೇ ಪ್ರಮುಖ ಚುನಾವಣಾ ಭರವಸೆಯಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಎಲ್ ಕಾರ್ಡ್‌(BPL Card) ಹೊಂದಿರುವ

ಜನರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ‘ಅನ್ನ ಭಾಗ್ಯ’ ಯೋಜನೆಯನ್ನು ಗುರುವಾರ ಘೋಷಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಡಿ.ಕೆ ಶಿವಕುಮಾರ್(D.K.Shivakumar),

ರಾಜ್ಯದ ಬಡ ಜನರಿಗಾಗಿ ‘ಅನ್ನ ಭಾಗ್ಯ’ ಯೋಜನೆಯನ್ನು ಘೋಷಿಸಲು (special prominence from congress) ನನಗೆ ತುಂಬಾ ಸಂತೋಷವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಿದೆ. ಇದು ಖಚಿತ ಎಂದು ಹೇಳಿದ್ದಾರೆ.

ಕಳೆದ ಜನವರಿ ತಿಂಗಳಲ್ಲಿ ಕೂಡ ಇದೇ ರೀತಿ ಕಾಂಗ್ರೆಸ್ ರಾಜ್ಯ ಘಟಕವು ಕರ್ನಾಟಕದ ಮಹಿಳೆಯರಿಗಾಗಿ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಘೋಷಿಸಿತು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಯೋಜನೆಯಡಿ ರಾಜ್ಯದ ಪ್ರತಿ ಗೃಹಿಣಿಗೆ ತಿಂಗಳಿಗೆ 2,000 ರೂ. ನೀಡಲಿದ್ದೇವೆ.

ಈ ಯೋಜನೆ 1.5 ಕೋಟಿ ಗೃಹಿಣಿಯರಿಗೆ ಅನುಕೂಲವಾಗಲಿದೆ ಎಂದು ಪಕ್ಷ ಹೇಳಿರುವ ಈ ಯೋಜನೆಯನ್ನು

ಬೆಂಗಳೂರಿನಲ್ಲಿ ಪಕ್ಷದ ‘ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ(Priyanka Gandhi) ವಾದ್ರಾ ಅವರ ಸಮ್ಮುಖದಲ್ಲಿ ಘೋಷಿಸಲಾಯಿತು.

ಸರ್ಕಾರ ರಚನೆಯಾದ ನಂತರ ಪ್ರತಿ ತಿಂಗಳು ರಾಜ್ಯದ ಪ್ರತಿ ಮನೆಗೂ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕೂಡ ಪಕ್ಷ ಭರವಸೆ ನೀಡಿದೆ.

ಈ ಯೋಜನೆಗಳು ಕನ್ನಡಿಗರಿಗೆ ರಾಜ್ಯದಲ್ಲಿ ಹಣದುಬ್ಬರದ ವಿರುದ್ಧ ಹೋರಾಡಲು ಮತ್ತು ಆಹಾರ,

ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯದಂತಹ ಅಗತ್ಯ ವಸ್ತುಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ಆಡಳಿತಾರೂಢ ಬಿಜೆಪಿ ಕೂಡ ತಮ್ಮ ಸರ್ಕಾರವು ಮುಂಬರುವ ಚುನಾವಣೆಯಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಂಡರೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 2,000 ರೂ. ಹಣ ನೀಡಲಿದ್ದೇವೆ ಎಂದು ಘೋಷಣೆ ಮಾಡಿದೆ.

Exit mobile version