ದಿಢೀರ್ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ ; ಕುತೂಹಲಕ್ಕೆ ಕಾರಣವಾಯ್ತು ನಿರ್ಧಾರ..!

New Delhi: ಮಹತ್ವದ ಬೆಳವಣಗೆಯಲ್ಲಿ ನರೇಂದ್ರ ಮೋದಿ (special session from central govt) ನೇತೃತ್ವದ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನವನ್ನು ಕರೆದಿರುವುದು

ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ದಿಢೀರ್ ನಿರ್ಧಾರದ ಹಿಂದೆ ಏನಿದೆ? ಎಂಬುದರ ಕುರಿತು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಅವರು, ಸೆಪ್ಟೆಂಬರ್ 18 ರಿಂದ 22 ರವರೆಗೆ 5 ದಿನಗಳ ಕಾಲ ಸಂಸತ್ತಿನ

ವಿಶೇಷ ಅಧಿವೇಶನವನ್ನು ಕರೆಯಲಾಗುವುದು. “ಅಮೃತ್ ಕಾಲ” (Amrit Kaala) ಸಂಸತ್ತಿನಲ್ಲಿ ಫಲಪ್ರದ ಚರ್ಚೆಗಳನ್ನು ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ. ಆದರೆ, ಸೆಪ್ಟೆಂಬರ್ 18 ರಿಂದ

22 ರವರೆಗೆ 5 ದಿನಗಳ ಕಾಲ ನಡೆಯುವ ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು (special session from central govt) ಕೇಂದ್ರ ಸರ್ಕಾರ ಬಹಿರಂಗಪಡಿಸಿಲ್ಲ.

ಗುಡ್ ನ್ಯೂಸ್: ಉಚಿತ ಬಸ್ಸಲ್ಲಿ ಓಡಾಡೋ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಶಕ್ತಿ ಯೋಜನೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

ಕೇಂದ್ರ ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿರುವ ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಅವರು, “ಭಾರತದ

ಪ್ರಮುಖ ಹಬ್ಬವಾದ ಗಣೇಶ ಚತುರ್ಥಿಯ ಸಮಯದಲ್ಲಿ ವಿಶೇಷ ಅಧಿವೇಶನವನ್ನು ಕರೆಯಲಾಗಿರುವುದು ದುರದೃಷ್ಟಕರ. ಇದು ಹಿಂದೂ ಧರ್ಮೀಯರ ಭಾವನೆಗಳಿಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ 23 ದಿನಗಳ ಅವಧಿಯಲ್ಲಿ ಒಟ್ಟು 17 ಅಧಿವೇಶನಗಳನ್ನು ನಡೆಸಿತು. ಮಣಿಪುರದ (Manipura) ಹಿಂಸಾಚಾರದ

ವಿಚಾರವನ್ನಟ್ಟಿಕೊಂಡು, ವಿಪಕ್ಷಗಳು ಪ್ರತಿದಿನವೂ ಅಧಿವೇಶನಕ್ಕೆ ಅಡ್ಡಿಪಡಿಸಿದವು. ಇದೇ ವೇಳೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಅವಿಶ್ವಾಸ ನಿರ್ಣಯ ಮಂಡಿಸಿದರು.

ಒಟ್ಟಾರೆಯಾಗಿ ಕಳೆದ ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರ ಮತ್ತು ಅವಿಶ್ವಾಸ ನಿರ್ಣಮದ ಮಧ್ಯೆಯೇ ಕಳೆದು ಹೋಗಿತ್ತು. ಇದೀಗ ಕೇಂದ್ರ ಸರ್ಕಾರ ವಿಶೇಷ ಅಧಿವೇಶನ

ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Exit mobile version