ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡುವರನ್ನು ಗುಂಡಿಕ್ಕಿ ಕೊಲ್ಲಿ : ಶ್ರೀಲಂಕಾ ಆದೇಶ!

srilanka

ದ್ವೀಪರಾಷ್ಟ್ರ(Island Country) ಶ್ರೀಲಂಕಾದಲ್ಲಿ(Srilanka) ಆಡಳಿತರೂಢ ಪಕ್ಷದ ವಿರುದ್ದ ಜನಾಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಸಾಮಾನ್ಯ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಾಗರಿಕ ಪ್ರತಿಭಟನೆ ಇದೀಗ ಉಗ್ರ ಸ್ವರೂಪ ಪಡೆದುಕೊಂಡಿದೆ. ಆಕ್ರೋಶಗೊಂಡಿರುವ ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುತ್ತಿದ್ದಾರೆ. ರಾಜಧಾನಿ ಕೊಲಂಬೊ(Colombo) ಸೇರಿದಂತೆ ದೇಶದ ಅನೇಕ ಕಡೆ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗುತ್ತಿದೆ. ಹೀಗಾಗಿ ಪ್ರತಿಭಟನಕಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಸೇನಾ ಪಡೆಗಳಿಗೆ ಆದೇಶಿಸಿದೆ.

ಕಳೆದ ಒಂದು ತಿಂಗಳಿಂದ ಶ್ರೀಲಂಕಾದ ಅನೇಕ ನಗರಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಕಳೆದೆರೆಡು ದಿನಗಳಿಂದ ಉಗ್ರ ಸ್ವರೂಪ ಪಡೆದುಕೊಂಡಿವೆ. ಪ್ರತಿಭಟನಕಾರರು ಸರ್ಕಾರಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಅದೇ ರೀತಿ ಆಡಳಿತ ಪಕ್ಷದ ನಾಯಕರು, ಕಾರ್ಯಕರ್ತರ ಮೇಲೆಯೂ ದಾಳಿ ಮಾಡಲಾಗುತ್ತಿದೆ. ಈಗಾಗಲೇ ಪ್ರತಿಭಟನಕಾರರು ಆಡಳಿತ ಪಕ್ಷದ ಸಂಸದನನ್ನು ಹತ್ಯೆ ಮಾಡಿದ್ದಾರೆ. ಪ್ರತಿಭಟನೆ ದಿನಕಳೆದಂತೆ ತೀವ್ರ ಸ್ವರೂಪ ಪಡೆಯುತ್ತಿದೆ. ಇನ್ನು ಪ್ರತಿಭಟನಕಾರರ ಒತ್ತಾಯಕ್ಕೆ ಮಣಿದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಆದರು ಪ್ರತಿಭಟನೆಯ ತೀವ್ರತೆ ಕಡಿಮೆಯಾಗಿಲ್ಲ. ರಾಜಧಾನಿ ಕೊಲಂಬೊ ಸೇರಿದಂತೆ ಇಡೀ ಶ್ರೀಲಂಕಾದ್ಯಂತ ಅನೇಕ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಪ್ರತಿಭಟನಕಾರರನ್ನು ನಿಯಂತ್ರಿಸಲು ಸರ್ಕಾರ ಸೇನೆಯನ್ನು ನಿಯೋಜಿಸಿದೆ. ಶ್ರೀಲಂಕಾ ಸೇನೆ ಕೊಲಂಬೊ, ಅನುರಾಧಪುರ, ಜಾಪ್ನಾ ಸೇರಿದಂತೆ ಹಲವು ನಗರಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಇನ್ನು ಸೇನೆಯ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ನಾಗರಿಕರ ಮೇಲೆ ಮಿಲಿಟರಿ ಪ್ರಯೋಗವನ್ನು ನಾವು ಒಪ್ಪುವುದಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮೀಷನ್ ಹೇಳಿದೆ. ಆದರು ಶ್ರೀಲಂಕಾ ಸರ್ಕಾರ ನಾಗರಿಕರ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿದೆ.

Exit mobile version