Visit Channel

ಶಾರದಾಂಬೆ ದರ್ಶನ ಪಡೆದ ರಾಷ್ಟ್ರಪತಿ ಕುಟುಂಬ

ಶೃಂಗೇರಿ ಅ 9  : ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಉಭಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಶುಕ್ರವಾರ ಶೃಂಗೇರಿ ಕೊರಡಕಲ್ಲು ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 11:55ಕ್ಕೆ ಶೃಂಗೇರಿಗೆ ಆಗಮಿಸಿದರು. ಈ ವೇಳೆ ಶ್ರೀಮಠದ ವತಿಯಿಂದ ಆನೆ, ಅಶ್ವ ಜೊತೆಗೆ ವಾದ್ಯಗೋಷ್ಟಿಗಳ ಮೂಲಕ ಪೂರ್ಣಕುಂಭ ಕಳಶದೊಂದಿಗೆ ಸ್ವಾಗತ ಕೋರಲಾಯಿತು. ನಂತರ ನೇರವಾಗಿ ಪತ್ನಿ ಸವಿತಾ, ಮಗಳು ಸ್ವಾತಿ ಜೊತೆಗೆ ಮೊದಲು ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನವರಾತ್ರಿ ಉತ್ಸವದಲ್ಲಿ ಕೆಲಕಾಲ ಭಾಗಿಯಾಗಿ ಶಾರದಾ ಪ್ರಸಾದವನ್ನು ಸ್ವೀಕರಿಸಿದರು. ದೇವಾಲಯದ ಒಳಾಂಗಣದಲ್ಲಿರುವ ಶಕ್ತಿ ಗಣಪತಿ, ಸಕಲದೇವತಾಮಂಟಪ, ಸರ್ಣಸಿಂಹಾಸನ ಹಾಗೂ ರಥಗಳನ್ನು ವೀಕ್ಷಿಸಿದ ಬಳಿಕ ಪ್ರವಚನ ಮಂದಿರದಲ್ಲಿ 12:55ಕ್ಕೆ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ಜಗದ್ಗುರು ಶ್ರೀವಿಧುಶೇಖರಭಾರರ್ತಿ ಸ್ವಾಮೀಜಿ ಅವರಿಗೆ ಕುಟುಂಬ ಸಮೇತರಾಗಿ ಫಲ. ಪುಷಗಳನ್ನು ಅರ್ಪಿಸಿ ಉಭಯ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ನರಸಿಂಹವನದ ಗುರುನಿವಾಸದ ಸಮೀಪವಿರುವ ಅದ್ವೈತ ಸಂಶೋಧನಾ ಕೇಂದ್ರಕ್ಕೆ ರಾಷ್ಟ್ರಪತಿ ಭೇಟಿ ನೀಡಿ ಅಲ್ಲಿರುವ ಪ್ರಾಚೀನ ಗ್ರಂಥಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ 4:11ರ ಸುಮಾರಿಗೆ ಶೃಂಗೇರಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಿದರು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.