
Sreeramulu: ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ.
ಅಧಿಕಾರ ಕೊಟ್ಟ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವ ಸ್ವಯಂಘೋಷಿತ ಮಹಾನಾಯಕರು ನೀವಲ್ಲವೇ? ಎಂದು ಬಿಜೆಪಿ (BJP) ನಾಯಕ ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ಟೀಕಿಸಿದ್ದಾರೆ.
ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಕುರಿತು ಸಿದ್ದರಾಮಯ್ಯನವರು ಮಾಡಿರುವ ಟೀಕೆಗೆ ಪ್ರತ್ಯುತ್ತರವಾಗಿ ಸರಣಿ ಟ್ವೀಟ್‌ಮಾಡಿರುವ ಅವರು, ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ (Politics) ಅಸ್ತ್ರ ಮಾಡಿಕೊಳ್ಳುತ್ತಿರುವುದು.
ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ(CM) ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ? ಈ ಬಗ್ಗೆ ಯಾರಿಗೂ ಸಂಶಯವೇ ಬೇಡ.
https://vijayatimes.com/oldest-historical-namib-desert/
ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ ಎಂದಿದ್ದಾರೆ.
ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿರುವ ವರದಿ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ.
ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ,
ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬೊಮ್ಮಾಯಿ (Bommai)ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಲೂ ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ.
ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3% ರಿಂದ 7.5% ಗೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ. ಅಧಿಕಾರಕ್ಕೀಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ ಎಂದು ಹೇಳಿದ್ದಾರೆ.
ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ,

ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ? ನಿಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 160 ಕೋಟಿ ಖರ್ಚು ಮಾಡಿ ನಡೆಸಿದ್ದ ಸಾಮಾಜಿಕ,
ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಪೂರ್ಣಗೊಂಡಿದ್ದರೂ ಅದನ್ನು ಬಹಿರಂಗಗೊಳಿಸದೆ ಕಸದ ಬುಟ್ಟಿಗೆ ಹಾಕಿದ್ದು ಯಾವ ವಚನಭ್ರಷ್ಟತೆ? ಉತ್ತರ ಕೊಡುತ್ತೀರಾ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.
ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ.
https://vijayatimes.com/oldest-historical-namib-desert/
ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ? ದೇವರಾಜ್ ಅರಸ್(Devaraj Aras) ನಂತರ ನಾನೇ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಎಂದು ಹಿಂಬಾಲಕರಿಂದ ಜೈಕಾರ ಹಾಕಿಸಿಕೊಳ್ಳುವ ಬುರಡೆರಾಮಯ್ಯವರೇ,
5 ವರ್ಷದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನಿಮ್ಮಷ್ಟು ಚೂರಿ ಹಾಕಿದ ಸಿ.ಎಂ. ಮತ್ತೊಬ್ಬರಿಲ್ಲ ಎಂಬುದನ್ನು ಬಿಡಿಸಿ ಹೇಳಬೇಕೇ?