Visit Channel

ಡ್ರಗ್ಸ್‌ ನಂಟು ಹಿನ್ನಲೆ ಅನನ್ಯಾ ಪಾಂಡೆ ಮನೆ ಮೇಲೆ ದಾಳಿ

ನವದೆಹಲಿ ಅ 21ಡ್ರಗ್ಸ್ ಪ್ರಕರಣದ (Drugs case) ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan)  ಅವರ ಪುತ್ರ ಆರ್ಯನ್ ಖಾನ್, ಜೈಲುವಾಸ ಇನ್ನೂ ಕೂಡಾ ಮುಂದುವರೆದಿದೆ. ಅಕ್ಟೋಬರ್ 3 ರಂದು ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಕಾರಣಕ್ಕಾಗಿ ಆರ್ಯನ ಖಾನ್ ನನ್ನು (Aryn khan) ಬಂಧಿಸಲಾಯಿತು. ನಂತರ ಇದುವರೆಗೂ ಆರ್ಯನ್ ಖಾನ್ ಗೆ ಜಾಮೀನು ಸಿಕ್ಕಿಲ್ಲ. ಆರ್ಯನ ಖಾನ್ ಬಂಧನದ ಅನೇಕರನ್ನು ಮತ್ತೆ ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಬಾಲಿವುಡ್ ನಟಿ   ಅನನ್ಯಾ ಪಾಂಡೆ (Ananya Panday) ಮನೆ ಮೇಲೆಯೂ  ಎನ್ ಸಿಬಿ ದಾಳಿ ನಡೆದಿದೆ. ಎನ್‌ಸಿಬಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. 

ಇದಲ್ಲದೇ, ಬಾಲಿವುಡ್‌ಗೆ ಹೊಸ ಎಂಟ್ರಿ ನೀಡಿದ ನಟಿಯ ಮನೆಯ ಮೇಲೆ ಕೂಡಾ ಎನ್‌ಸಿಬಿ ದಾಳಿ ನಡೆದಿದೆ. ಆರ್ಯನ್ ಖಾನ್ ವಾಟ್ಸಪ್ ಚಾಟ್ ನಲ್ಲಿ ಈ ನಟಿಯ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಚಾಟ್ ಅನ್ನು ವಿಶೇಷ NDPS ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. 

ಮೂಲಗಳ ಪ್ರಕಾರ, ನ್ಯಾಯಾಲಯದಲ್ಲಿ ಸಲ್ಲಿಸಿದ ಚಾಟ್‌ನಲ್ಲಿ, ಆರ್ಯನ್ ಖಾನ್ (Aryan Khan) ಒಬ್ಬ ನಟಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇಬ್ಬರೂ ಡ್ರಗ್ಸ್ (Drugs) ಬಗ್ಗೆಯೇ  ಚರ್ಚಿಸುತ್ತಿದ್ದರು ಎನ್ನಲಾಗಿದೆ. ಆರ್ಯನ್ ಖಾನ್ ಜಾಮೀನಿನ ವಿಚಾರಣೆಗೆ ಮುನ್ನ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜೊತೆ ಮುಂಬೈ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಗ್ಗೆ ಚರ್ಚಿಸಿರುವ ವಾಟ್ಸಾಪ್ ಚಾಟ್  ಅನ್ನು ಸಲ್ಲಿಸಿದೆ.

ಈ ಮಧ್ಯೆ, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥರ್ ರಸ್ತೆ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಅವರನ್ನು ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಗುರುವಾರ ಭೇಟಿ ಮಾಡಿದ್ದಾರೆ. ಶಾರುಖ್ ಖಾನ್ ಜೈಲಿಗೆ ಆಗಮಿಸುವ ದೃಶ್ಯಾವಳಿಗಳು ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. 

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.