ಬೆಂಗಳೂರು, ಮಾ. 02: 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಎಲ್ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂ.21 ರಿಂದ ಜು.5 ರವರೆಗೂ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ಸರ್ಕಾರ ಆಕ್ಷೇಪಣೆಗಳಿಗೆ ಆಹ್ವಾನಿಸಿತ್ತು. ಆದರೆ ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿ ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ.
ಅದರಂತೆ, ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,
ಜೂ. 24 -ಗಣಿತ, ಜೂ. 28 -ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜು. 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5 – ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.