ಚಾಮರಾಜನಗರ, ಮೇ. 17: ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಬಳಿಕ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಹಾಮಾರಿ ಕೊರೊನಾ 2ನೇ ಅಲೆಯು ರಾಜ್ಯದೆಲ್ಲೆಡೆ ಅತ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಹಿಂದೆ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ನಡುವೆ ಕೊರೊನಾ ನಿಯಂತ್ರಣದ ಬಳಿಕ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್, ಸೋಮವಾರ ಚಾಮರಾಜನಗರದ ಹನೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮುಂಬೈನಗರದಲ್ಲೇ ಕೊರೊನಾ ಸೋಂಕು ಕಡಿಮೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುವುದಿಲ್ಲವೇ..? ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.