ಬೆಂಗಳೂರು: ಕೊರೊನಾ ನಡುವೆಯೂ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ರಾಜ್ಯಸರ್ಕಾರ ನಿರ್ಧರಿಸಿದ್ದು ಈ ಹಿನ್ನೆಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಪ್ರಕಟಿಸಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 8 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ಕೊರನಾ ಪಾಸ್ ಇಲ್ಲ : ಈ ಬಾರಿಯ ಎಸ್ಎಸ್ಎಲ್’ಸಿ ಪರೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಕೊರೊನಾ ಪಾಸ್ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮಗಳನ್ನು ಪೂರ್ಣಗೊಳಿಸಿವೆ, ಇನ್ನು ವಿದ್ಯಾರ್ಥಿಗಳಿಗೆ ಸಹಾಯವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ಕೋವಿಡ್ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುವುದಲ್ಲದೆ, ಅವರ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದರು.