SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಜ 7 :  ಕೊರೊನಾ ಮತ್ತು ಓಮಿಕ್ರಾನ್‌ ಹಿನ್ನಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತೋ ಇಲ್ಲವೋ ಎಂಬ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆ ಎಸ್ಎಸ್ಎಲ್‌ಸಿ ವೇಳಾಪಟ್ಟಿಯನ್ನು ಬಿಡುಗಡೆಮಾಡಿದೆ
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

ಕಳೆದ ಭಾರಿ ಕೊರೊನಾ ಸೋಂಕು ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿತ್ತು. ಇದರ ನಡುವೆ ಎರಡು ದಿನಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಸೀಮಿತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡುವ ಷರತ್ತಿನೊಂದಿಗೆ ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆ ತಯಾರಿಸಿ ಎರಡು ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು. ಆರು ವಿಷಯಗಳಿಗೆ ಎರಡು ದಿನದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಆದರೆ ಈ ಬಾರಿ ಆರು ವಿಷಯಗಳಿಗೆ ಹಳೇ ಪದ್ಧತಿಯಂತೆ ಆರು ದಿನ ಪರೀಕ್ಷೆ ನಡೆಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ.
ಹೀಗಾಗಿ ಹಳೇ ಪದ್ಧತಿಯಂತೆ ಪ್ರಥಮ ಭಾಷೆಗೆ 125 ಅಂಕ, ( 100 ಅಂಕ ಲಿಖಿತ ಪರೀಕ್ಷೆ, 25 ಅಂಕ ಶಾಲಾ ಮೌಲ್ಯಮಾಪನ ಅಂಕ) ಇತರೆ ಐದು ವಿಷಯಗಳಿಗೆ 80 + 20 ( 20 ಶಾಲಾ ಮೌಲ್ಯಮಾಪನ) ಅಂಕ ನಿಗದಿ ಪಡಿಸಲಾಗಿದೆ. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಖ್ಯ ಪರೀಕ್ಷೆಯ ಅಂತಿಮ ದಿನಾಂಕ ಪ್ರಕಟ ಮಾಡಲಿದೆ. ಪ್ರಶ್ನೆ ಪತ್ರಿಕೆ ಓದಲು ಹದಿನೈದು ನಿಮಿಷ ಕಾಲಾವಕಾಶ ನೀಡಲಾಗಿದೆ.

ವೇಳಾಪಟ್ಟಿ
ಮಾರ್ಚ್ 28 – ಕನ್ನಡ
ಮಾರ್ಚ್ 30 – ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1 – ಅರ್ಥಶಾಸ್ತ್ರ
ಏಪ್ರಿಲ್‌ 4 – ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 – ಸಮಾಜ‌ ವಿಜ್ಞಾನ
ಏಪ್ರಿಲ್ 8 – ತೃತೀಯ ಭಾಷೆ ಹಿಂದಿ
ಏಪ್ರಿಲ್ 11 – ವಿಜ್ಞಾನ


Exit mobile version