ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ‘ಕೊರೊನಾ ಪಾಸ್‌’ ಇಲ್ಲ

nagesh bc

ಬೆಂಗಳೂರು ಜ 22 : ಕಳೆದ ಬಾರಿಯಂತೆ ಈ ಬಾರಿ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳನ್ನು ನೇರವಾಗಿ ಪಾಸ್‌ ಮಾಡುವ ಯೋಜನೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಕಳೆದ ವರ್ಷ ಕೋವಿಡ್ ಸೋಂಕು ತೀವ್ರವಾಗಿ ಹರಡಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾಗಿದ್ದರು ಆದರೆ ಈ ವರ್ಷ ಆ ವಿನಾಯಿತಿ ಇರುವುದಿಲ್ಲ, ಎಲ್ಲಾ ಎಸ್ಎಸ್ಎಲ್’ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಜೊತೆಗೆ ಹಳೆಯ ಮಾದರಿಯಲ್ಲೇ ಪರೀಕ್ಷೆಗಳು ನಡೆಯುತ್ತವೆ ಎಂದು ಅವರು ತಿಳಿಸಿದರು.

ಈ ಬಾರಿಯ ಎಸ್ಎಸ್ಎಲ್’ಸಿ ಪರೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮಗಳನ್ನು ಪೂರ್ಣಗೊಳಿಸಿವೆ, ಇನ್ನು ವಿದ್ಯಾರ್ಥಿಗಳಿಗೆ ಸಹಾಯವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ಕೋವಿಡ್ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುವುದಲ್ಲದೆ, ಅವರ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದರು.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಹೇಳಿದ್ದಾರೆ.

Exit mobile version