SSLC ಪರೀಕ್ಷೆ ಹಿನ್ನೆಲೆ: KSRTC ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ

ಬೆಂಗಳೂರು, ಜು. 13: ರಾಜ್ಯದಲ್ಲಿ SSLC ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಕೊರೊನಾ ಆತಂಕದ ನಡುವೆಯೂ ನಡೆಯುತ್ತಿರುವ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಬೆನ್ನಲ್ಲೇ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಿದೆ.

ಜುಲೈ 19 ಹಾಗೂ 22ರಂದು ಎರಡು ದಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ವರೆಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ.

ಎಸ್ಎಸ್.ಎಲ್ಸಿ ಪರೀಕ್ಷೆಯ ನಡೆಯುವ ಎರಡೂ ದಿನವೂ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಸಾಮಾನ್ಯ ಹಾಗೂ ವೇಗಧೂತ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಸ್ ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version